ಪ್ರಗತಿವಾಹಿನಿ ಸುದ್ದಿ, ಕಲಬುರ್ಗಿ : ಬರಲಿರುವ ವಿಧಾನಸಭೆ ಚುನಾವಣೆಯಲ್ಲಿ ನಾಲ್ಕರಿಂದ ಆರು ಹಾಲಿ ಶಾಸಕರಿಗೆ ಟಿಕೆಟ್ ಸಿಗುವುದಿಲ್ಲ. ಉಳಿದ ಎಲ್ಲ ಶಾಸಕರಿಗೆ ಟಿಕೆಟ್ ನೀಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ (BS Yediyurappa) ತಿಳಿಸಿದ್ದಾರೆ.
ವಿಜಯ ಸಂಕಲ್ಪ ರಥಯಾತ್ರೆಗೆ ಮುನ್ನ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 4-6 ಹಾಲಿ ಶಾಸಕರು ಟಿಕೆಟ್ ಕಳೆದುಕೊಳ್ಳುತ್ತಾರೆ. ಆ ಕ್ಷೇತ್ರಗಳಲ್ಲಿ ಬೇರೆಯವರಿಗೆ ಟಿಕೆಟ್ ಸಿಗಲಿದೆ. ರಾಜ್ಯದಲ್ಲಿ ಕನಿಷ್ಠ 140 ಸೀಟು ಗೆದ್ದು ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಅವರು ಹೇಳಿದರು.
ಆದರೆ, ಟಿಕೆಟ್ ತಪ್ಪಿಸುವುದು ವಯಸ್ಸಿನ ಕಾರಣದಿಂದವೋ, ಪರಫಾರ್ಮನ್ಸ್ ಇಲ್ಲದ ಕಾರಣದಿಂದಲೋ, ಅಥವಾ ಪಕ್ಷಾಂತರ ಕಾರಣದಿಂದಲೋ ಎನ್ನುವ ಕುರಿತು ಯಡಿಯೂರಪ್ಪ ಸ್ಪಷ್ಟನೆ ನೀಡಲಿಲ್ಲ.
ಬೆಳಗಾವಿ ಜಿಲ್ಲೆಯಲ್ಲೂ ಮೂವರು ಹಾಲಿ ಬಿಜೆಪಿ ಶಾಸಕರಿಗೆ ಟಿಕೆಟ್ ತಪ್ಪಲಿದೆ ಎನ್ನುವ ಸುದ್ದಿ ದಟ್ಟವಾಗಿದೆ. ಜೊತೆಗೆ ಹುಕ್ಕೇರಿ ಮತ್ತು ಸದತ್ತಿಯಲ್ಲಿ ಹಾಲಿ ಶಾಸಕರು ನಿಧನರಾಗಿದ್ದರಿಂದ ಹೊಸಬರಿಗೆ ಟಿಕೆಟ್ ಕೊಡಬೇಕಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ