Politics

*ಹೊಸ ವರ್ಷದ ಆಚರಣೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಗೃಹ ಸಚಿವ ಪರಮೇಶ್ವರ್*

ಪ್ರಗತಿವಾಹಿನಿ ಸುದ್ದಿ: ನಿನ್ನೆ ರಾತ್ರಿ ಹೊಸ ವರ್ಷದ ಆಚರಣೆಯಲ್ಲಿ ಜನ ಭಾಗವಹಿಸಿದ್ದರು. ಸಂಭ್ರಮಾಚರಣೆಯ ವೇಳೆ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಪೊಲೀಸರು ಉತ್ತಮ ಭದ್ರತೆ ಒದಗಿಸಿದ್ದಾರೆ ಎಂದು ಗೃಹ ಸಚಿವ ಡಾ. ಪರಮೇಶ್ವರ್ ತಿಳಿಸಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಯಲ್ಲಿ ಹೊಸ ವರ್ಷಾಚರಣೆ ವೇಳೆ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಶಾಂತಿಯುತವಾಗಿ ಹೊಸ ವರ್ಷಾಚರಣೆ ಮಾಡಲಾಗಿದೆ. ನಾನು ಎಲ್ಲಿಯೂ ಭೇಟಿ ನೀಡಿಲ್ಲ ಎಲ್ಲರೂ ಶಾಂತಿಯಿಂದ ಹೊಸ ವರ್ಷ ಆಚರಣೆ ಮಾಡಿದ್ದಾರೆ. ರಾಜ್ಯದ ಯುವಕರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಡಿ.ಕೆ ಸುರೇಶ್ ತಂಗಿ ಎಂದು ಹೇಳಿಕೊಂಡು ಐಶ್ವರ್ಯ ಗೌಡ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಕ್ರಿಯಿಸಿದ ಅವರು, ಈ ಸಂಬಂಧ ಡಿ.ಕೆ ಸುರೇಶ್ ಅವರು ದೂರು ನೀಡಿದ್ದಾರೆ. ಪೊಲೀಸರು ವಿಚಾರಣೆ ಮಾಡುತ್ತಾರೆ. ಸರ್ಕಾರ ಇದರಲ್ಲಿ ಭಾಗಿಯಾಗಲ್ಲ ಎಂದರು.

2025 ಆರಂಭವಾಗಿದೆ. ವಿಪಕ್ಷಗಳು ಸರ್ಕಾರದ ಜತೆ ಕೈಜೋಡಿಸಬೇಕು. ಅಭಿವೃದ್ಧಿಗೆ ಸಹಕಾರ ನೀಡಬೇಕು. ಪ್ರಿಯಾಂಕ್ ಖರ್ಗೆ ಕೂಡ ಜವಾಬ್ದಾರಿಯಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ವಿರುದ್ಧ ಅನಗತ್ಯ ಆರೋಪಗಳನ್ನು ಮಾಡಲಾಗುತ್ತಿದೆ. ಯಾವುದೇ ಪೂರಕ ಸಾಕ್ಷ್ಯಗಳಿದ್ದರೆ ನಾವು ಸ್ವೀಕರಿಸುತ್ತೇವೆ. ಅವರು ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದು ಹೇಳಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button