Kannada NewsKarnataka NewsLatest

ಬೆಳಗಾವಿ ಜಿಲ್ಲೆಯಲ್ಲಿ ಶಾಲೆ, ಕಾಲೇಜಿಗೆ ನಾಳೆ ರಜೆ ಇಲ್ಲ – ಜಿಲ್ಲಾಧಿಕಾರಿ ಸ್ಪಷ್ಟನೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಹಿಜಾಬ್ ಕುರಿತು ಹೈಕ್ರೋಟ್ ಮಂಗಳವಾರ ತೀರ್ಪು ಪ್ರಕಟಿಸಲಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾದ್ಯಾಂತ ಮಂಗಳವಾರದಿಂದ ಅನಿರ್ಧಿಷ್ಟಾವಧಿ 144ನೇ ಕಲಂ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಆದರೆ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿಲ್ಲ. ಶಾಲೆ ಕಾಲೇಜುಗಳು ಎಂದಿನಂತೆ ನಡೆಯಲಿವೆ. ಶಾಲೆ, ಕಾಲೇಜಿಗೆ ರಜೆ ಘೋಷಿಸುವ ಅವಶ್ಯಕತೆ ಇಲ್ಲ. ಪರೀಕ್ಷೆಗಳೂ ನಿಗದಿಯಂತೆ ನಡೆಯಲಿವೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಪ್ರಗತಿವಾಹಿನಿಗೆ ತಿಳಿಸಿದ್ದಾರೆ.

ಕೆಲವು ಡಿಜಿಟಲ್ ಮಾಧ್ಯಮಗಳಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಶಾಲೆ, ಕಾಲೇಜಿಗೆ ರಜೆ ಘೋಷಿಸಲಾಗಿದೆ ಎನ್ನುವ ಸುದ್ದಿ ಪ್ರಕಟವಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ಬೆಳಗಾವಿಯಲ್ಲಿ ಶಾಲೆ, ಕಾಲೇಜಿಗೆ ರಜೆ ಕೊಡುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

Home add -Advt

ಈ ಸುದ್ದಿ ಓದಿ –

ಬೆಳಗಾವಿ ಜಿಲ್ಲಾದ್ಯಂತ ಅನಿರ್ಧಿಷ್ಟಾವಧಿ ನಿಷೇಧಾಜ್ಞೆ; ಜಿಲ್ಲಾಧಿಕಾರಿ ಹಠಾತ್ ಆದೇಶ

Related Articles

Back to top button