ಪ್ರಗತಿವಾಹಿನಿ ಸುದ್ದಿ; ಮಂಡ್ಯ: ಇತ್ತೀಚೆಗೆ ಚಾಮರಾಜನಗರ ಜಿಲ್ಲೆಯಲ್ಲಿ ಲಸಿಕೆ ಪಡೆದುಕೊಳ್ಳದವರಿಗೆ ಪಡಿತರ ಇಲ್ಲ ಎಂಬ ಜಿಲ್ಲಾಧಿಕಾರಿ ಆದೇಶ ತೀವ್ರ ಚರ್ಚೆಗೆ ಗುರಿಯಾಗಿತ್ತು. ಇದರ ಬೆನ್ನಲ್ಲೇ ಇದೀಗ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನಲ್ಲಿಯೂ ತಹಶೀಲ್ದಾರ್ ಇಂತದ್ದೇ ಆದೇಶ ಹೊರಡಿಸಿದ್ದು, ವ್ಯಾಕ್ಸಿನ್ ಪ್ರಮಾಣ ಪತ್ರವಿಲ್ಲದೇ ರೇಷನ್ ನೀಡುವುದಿಲ್ಲ ಎಂದು ಆದೇಶ ಹೊರಡಿಸಿದ್ದಾರೆ.
ಚಾಮರಾಜನಗರ ಜಿಲ್ಲೆಯಲ್ಲಿ ಇತ್ತೀಚೆಗೆ ಜಿಲ್ಲಾಧಿಕಾರಿ ಹೊರಡಿಸಿದ್ದ ನೋ ವ್ಯಾಕ್ಸಿನ್, ನೋ ರೇಷನ್ ಆದೇಶ ಸಾಕಷ್ಟು ಟೀಕೆಗೆ ಗುರಿಯಾಗಿತ್ತು. ಈ ನಡುವೆ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಜನರ ಮನವೊಲಿಕೆ ಮಾಡಿ ಲಸಿಕೆ ಹಾಕಬೇಕು ಹೊರತು ಲಸಿಕೆ ಹಾಕಿಸಿಕೊಳ್ಳದಿದ್ದರೆ ಪಡಿತರ ವಿತರಣೆಯೇ ಇಲ್ಲ ಎಂದು ಹೇಳುವುದು ಸರಿಯಲ್ಲ. ಅಧಿಕಾರಿಗಳು ಇಂತಹ ಆದೇಶ ಹೊರಡಿಸುವಂತಿಲ್ಲ ಎಂದು ಸೂಚಿಸಿದ್ದರು. ಸಿಎಂ ಹೇಳಿಕೆಗೂ ಗಮನಕೊಡದ ಮಳವಳ್ಳಿ ತಹಶೀಲ್ದಾರ್ ಎಂ.ವಿಜಯಣ್ಣ ವ್ಯಾಕ್ಸಿನ್ ಪ್ರಮಾಣ ಪತ್ರ ತೋರಿಸಿದರೆ ಮಾತ್ರ ರೇಷನ್ ನೀಡುವುದಾಗಿ ಆದೇಶ ಹೊರಡಿಸಿದ್ದಾರೆ.
ಅಲ್ಲದೇ ನ್ಯಾಯಬೆಲೆ ಅಂಗಡಿಗಳ ಮಾಲೀಕರಿಗೆ ಲಸಿಕೆ ಹಾಕಿಸುವ ಟಾರ್ಗೆಟ್ ನೀಡಿದ್ದು, ಗ್ರಾಮಗಳಲ್ಲಿ ಸಿಬ್ಬಂದಿಗಳು ಪಡಿತರ ಪಡೆಯಬೇಕಾದರೆ ಲಸಿಕೆ ಕಡ್ಡಾಯ ಎಂದು ಪ್ರಚಾರ ಮಾಡುತ್ತಿದ್ದಾರೆ.
ಮಾಜಿ ಸಚಿವರ ವಕೀಲರ ಬಂಧನ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ