
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಸಾರ್ವಜನಿಕರಿಗೆ ಓಸಿ ಜುಗಾರ್ ಆಡಲು ಪ್ರೇರೇಪಿಸುತ್ತಿದ್ದ ಹಾಗೂ ಮಾದಕ ವಸ್ತು ಮಾರಾಟ, ಕೊಲೆ ಯತ್ನದಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳನ್ನು ಜಿಲ್ಲೆಯಿಂದ ಗಡಿಪಾರು ಮಾಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಸಾರ್ವಜನಿಕರಿಗೆ ಓಸಿ ಆಡಲು ಪ್ರೇರೇಪಿಸುತ್ತಿದ್ದ ಮಹೇಶ್ ಯಲ್ಲಪ್ಪ ಯಲ್ಲಾರಿ ಹಾಗೂ ಗಾಂಜಾ ಮಾರಾಟ, ಕೊಲೆಯತ್ನದಂತಹ ಗಂಭೀರ ಪ್ರಕರಣದಲ್ಲಿ ಭಾಗಿಯಾಗಿದ್ದ ವಿಲಾಸ ಶಂಕರ ಬಾಳೆಕುಂದ್ರಿ ಎಂಬ ಇಬ್ಬರು ಆರೋಪಿಗಳನ್ನು 1 ವರ್ಷದ ಅವಧಿಗೆ ಬೆಳಗಾವಿ ಜಿಲ್ಲೆಯಿಂದ ಗಡಿಪಾರು ಮಾಡಿ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಉಪಪೊಲೀಸ್ ಆಯುಕ್ತ ರವೀಂದ್ರ ಕೆ ಗಡಾದಿ ಆದೇಶ ಹೊರಡಿಸಿದ್ದಾರೆ.
ಈ ಮೂಲಕ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗವಹಿಸುವ ಸಮಾಜಘಾತುಕರಿಗೆ ಎಚ್ಚರಿಕೆ ನೀಡಲಾಗಿದೆ. ಮಟಕಾ, ಜೂಜಾಟ, ಗಾಂಜಾ ಮಾರಾಟ ಮಾಡುವವರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಹತ್ತಿರದ ಪೊಲೀಸ್ ಠಾಣೆಗೆ ದೂರು ನೀಡುವಂತೆ ಬೆಳಗಾವಿ ಉಪ ಪೊಲೀಸ್ ಆಯುಕ್ತರು ಮನವಿ ಮಾಡಿದ್ದಾರೆ.
250 ಕೆಜಿ ಎಮ್ಮೆ ಮಾಂಸ ವಶ