
ಪ್ರಗತಿವಾಹಿನಿ ಸುದ್ದಿ: ಪ್ರತಿಷ್ಠಿತ ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗಿದೆ. ವೆನಿಜುವೆಲಾದ ವಿಪಕ್ಷ ನಾಯಕಿ ಮರಿಯಾ ಕೊರಿನಾ ಮಚಾಡೋಗೆ 2025ನೇ ಸಾಲಿನ ನೊಬೆಲ್ ಶಾಂತಿ ಪ್ರಶಸ್ತಿ ಘೋಷಿಸಲಾಗಿದೆ. ಈ ಮೂಲಕ ನೊಬೆಲ್ ಶಾಂತಿ ಪ್ರಶಸ್ತಿ ಕನಸು ಕಂಡಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ನಿರಾಸೆಯಾಗಿದೆ.
ಪ್ರಪಂಚದ ಏಳು ಯುದ್ಧಗಳನ್ನು ತಾನು ನಿಲ್ಲಿಸಿರುವುದಾಗಿ ಹೇಳಿಕೊಂಡಿದ್ದ ಡೊನಾಲ್ಡ್ ಟ್ರಂಪ್ ತಾನು ಎಂಟನೇ ಯುದ್ಧ ಪರಿಹರಿಸುವ ಹಂತದಲ್ಲಿದ್ದೇನೆ. ವಿಶ್ವದಲ್ಲಿ ಯಾರೂ ಇಷ್ಟೊಂದು ಪ್ರಕರಣಗಳನ್ನು ಪರಿಹರಿಸಿಲ್ಲ ಎಂದು ಹೇಳಿಕೊಂಡಿದ್ದರು. ಅಲ್ಲದೇ ಈಬಾರಿ ನೊಬೆಲ್ ಶಾಂತಿ ಪ್ರಶಸ್ತಿ ಮೇಲೆ ಕಣ್ಣಿಟ್ಟಿದ್ದರು. ಆದರೆ ಅಂತಿಮವಾಗಿ ಪ್ರಶಸ್ತಿ ಟ್ರಂಪ್ ಕೈತಪ್ಪಿದೆ.
ಈಬಾರಿಯ ನೊಬೆಲ್ ಶಾಂತಿ ಪುರಸ್ಕಾರವನ್ನು ವೆನುಜುವೆಲಾ ವಿಪಕ್ಷ ನಾಯಕಿ ಮರಿಯಾ ಕೊರಿನಾ ಮೊಚಾಡೋಗೆ ನೀಡಲಾಗಿದೆ.