Belagavi NewsBelgaum NewsKannada NewsKarnataka News

*ಕರಾವಳಿ ಸೇರಿ 6 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್*

ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಂತ ಮಳೆ ಅಬ್ಬರ ಜೋರಾಗಿದೆ. ಕರಾವಳಿ ಸೇರಿ 6 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆಯಾಗಿದ್ದು, ಧಾರಾಕಾರ ಮಳೆ ಸುರಿಯಬಹುದು ಎಂದು ಹವಾಮಾನ ಇಲಾಖೆ ಹೇಳಿದೆ.

25 ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ. ಬೆಂಗಳೂರು ನಗರದಲ್ಲಿ ಇಂದು ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗಬಹುದು. ದಕ್ಷಿಣ ಒಳನಾಡಿನ ಶಿವಮೊಗ್ಗ ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲೂ ಮಳೆಯ ತೀವ್ರತೆ ಗಣನೀಯವಾಗಿ ಇಳಿಮುಖವಾಗಿದೆ. ಆದಾಗ್ಯೂ ಇಲ್ಲಿ ಧಾರಾಕಾರ ಮಳೆಯಾಗುತ್ತಿರುವ ಕಾರಣ ಯೆಲ್ಲೋ ಅಲರ್ಟ್ ಘೋಷಣೆಯಾಗಿದೆ.

Home add -Advt

ಇನ್ನುಳಿದಂತೆ, ಉತ್ತರ ಒಳನಾಡಿನ ಬೀದರ್, ಕಲಬುರಗಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಅಂತೆಯೇ, ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ ಕೋಲಾರ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ವಿಜಯನಗರ, ತುಮಕೂರು, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ ಜಿಲ್ಲೆಗಳಲ್ಲಿ ಹಲವೆಡೆ ಸಾಧಾರಣ ಮಳೆಯಾಗಲಿದೆ.

Related Articles

Back to top button