ಪ್ರಗತಿವಾಹಿನಿ ಸುದ್ದಿ; ನವದೆಹಲಿ : ಉತ್ತರ ಭಾರತದಾದ್ಯಂತ ಶೀತಗಾಳಿ ಹೆಚ್ಚಿದ್ದು, ದಟ್ಟವಾದ ಮಂಜು ಕವಿದ ವಾತಾವರಣವಿರುವುದರಿಂದ ರೈಲ್ವೇ ಸಂಚಾರದಲ್ಲಿ ವ್ಯತ್ಯಯವಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮೂರು ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದ್ದು, ಇದು ಕಳೆದ ಎರಡು ವರ್ಷಗಳಲ್ಲಿ ಜನವರಿಯಲ್ಲಿ ದಾಖಲಾದ ಅತಿ ಕಡಿಮೆ ಕನಿಷ್ಠ ತಾಪಮಾನವಾಗಿದೆ.
ದೆಹಲಿಯ ಡಾಲ್‌ಹೌಸಿಯಲ್ಲಿ 4.9 ಡಿಗ್ರಿ ಸೆಲ್ಸಿಯಸ್, ಧರ್ಮಶಾಲಾ 5.2 ಡಿಗ್ರಿ ಸೆಲ್ಸಿಯಸ್, ಕಂಗ್ರಾ 3.2, ಶಿಮ್ಲಾ 3.7, ಡೆಹ್ರಾಡೂನ್ 4.6, ಮಸ್ಸೂರಿ 4.4 ಮತ್ತು ನೈನ್‌ಟಾಲ್‌ನಲ್ಲಿ 6.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ.
ಮಂಜು ಕವಿದ ವಾತಾವರಣವಿರುವ ಕಾರಣಕ್ಕೆ 12 ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ. ಈ ರೈಲುಗಳು 6ಗಂಟೆ ಕಾಲ ತಡವಾಗಿ ಸಂಚರಿಸಲಿವೆ.
ಅಮರನಾಥ ಯಾತ್ರೆಯ ಮೂಲ ಶಿಬಿರ ಇರುವ ಅನಂತನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿ ಮೈನಸ್ 9.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಿಸಿದೆ. ಜಾರ್ಖಂಡ್‌ನಲ್ಲಿ ದಟ್ಟವಾದ ಮಂಜು ವಾತಾವರಣವಿದ್ದು, 7-10 ಡಿಗ್ರಿ ಸೆಲ್ಸಿಯಲ್ ತಾಪಮಾನವಿದೆ. ಶಾಲೆಗಳಿಗೆ ಜನವರಿ 8 ರವರೆಗೆ ರಜೆ ಘೋಷಿಸಲಾಗಿದೆ.
ಪಂಜಾಬ್, ಹರಿಯಾಣ, ರಾಜಸ್ಥಾನ, ಉತ್ತರ ಪ್ರದೇಶ ಮತ್ತು ಬಿಹಾರ ಸೇರಿದಂತೆ ಉತ್ತರ ಭಾರತದಾದ್ಯಂತ ದಟ್ಟವಾದ ಮಂಜು ಆವರಿಸಿದ್ದು, ಮುಂದಿನ ವಾರದಲ್ಲೂ ಇದೇ ಪರಿಸ್ಥಿತಿ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
*ಸಿಎಂ ಮೂಗಿನ ನೇರಕ್ಕೆ ಭ್ರಷ್ಟಾಚಾರ ನಡೆಯುತ್ತಿದೆ; ಆತ ಯಾರಿಗೆ ಹಣ ಕೊಡಲು ತಂದಿದ್ದ?; ಸಿದ್ದರಾಮಯ್ಯ ಪ್ರಶ್ನೆ*
https://pragati.taskdun.com/vidhanasoudha10-5-lakh-foundsiddaramaiah-reaction/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ