Karnataka NewsLatest

ಉತ್ತರದಲ್ಲಿ ಪ್ರವಾಹ ಭೀತಿ; ಆರೆಂಜ್ ಅಲರ್ಟ್ ಘೋಷಣೆ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಉತ್ತರ ಕರ್ನಾಟಕದಾದ್ಯಂತ ಮಳೆಯ ಅಬ್ಬರ ಜೋರಾಗಿದ್ದು, ಪ್ರವಾಹ ಭೀತಿ ಎದುರಾಗಿದೆ. ಈ ನಡುವೆ ಹಲವು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಮಹಾರಾಷ್ಟ್ರದಲ್ಲಿ ಮಳೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಡ್ಯಾಂಗಳಿಂದಲೂ ಅಪಾರ ಪ್ರಮಾಣದಲ್ಲಿ ನೀರನ್ನ ಹೊರಬಿಡಲಾಗುತ್ತಿದೆ. ಬೆಳಗಾವಿ ಜಿಲ್ಲೆಯ ಸವದತ್ತಿಯಲ್ಲಿರುವ ನವಿಲು ತೀರ್ಥ ಡ್ಯಾಂನಿಂದ ನೀರು ಬಿಟ್ಟಿರುವ ಹಿನ್ನೆಲೆಯಲ್ಲಿ ಸವದತ್ತಿ ತಾಲೂಕಿನ ಮುನವಳ್ಳಿ ಮನೆ, ಅಂಗಡಿಗಳು ಜಲಾವೃತಗೊಂಡಿವೆ. ಎಂಕೆ ಹುಬ್ಬಳ್ಳಿಯ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನ ಜಲಾವೃತಗೊಂಡಿದೆ.

ಓಂನಗರ, ಶಾಹು ನಗರ, ಮಚ್ಷೆ, ಮಾರಿಹಾಳ ಹಳ್ಳಗಳು ತುಂಬಿ ಹರಿಯುತ್ತಿವೆ. ಮಾರಿಹಾಳದಲ್ಲಿ ರಸ್ತೆಯ ಬದಿಯಲ್ಲಿ ಭೂಕುಸಿತ ಉಂಟಾಗಿದ್ದು, ಬೆಳಗಾವಿ-ಗೋವಾ ರಸ್ತೆ ಬಂದ್ ಆಗಿದೆ.

ನವಿಲುತೀರ್ಥ ಡ್ಯಾಂನಿಂದ ನೀರು ಬಿಟ್ಟಿರುವ ಹಿನ್ನೆಲೆಯಲ್ಲಿ ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲಿ ಪ್ರವಾಹ ಭೀತಿ ಉಂಟಾಗಿದೆ. ಮಲಪ್ರಭಾ ನದಿ ತಟದಲ್ಲಿರುವ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಿಲಾಗಿದೆ.

ಗೋವನಕೊಪ್ಪ-ಕೊಣ್ಣೂರು ಮಾರ್ಗದ ಹಳೆ ರಸ್ತೆ ಸೇತುವೆ ಜಲಾವೃತಗೊಂಡಿದೆ. ಸ್ಥಳಕ್ಕೆ ಎಸ್‍ಪಿ ಲೋಕೇಶ್ ಜಗಲಾಸರ್, ಎಸಿ ಗಂಗಪ್ಪ, ಬಾದಾಮಿ ತಹಸೀಲ್ದಾರ ಸುಹಾಸ ಇಂಗಳೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಹಿಡಕಲ್ ಡ್ಯಾಂನಿಂದ 33 ಸಾವಿರ ಕ್ಯೂಸೆಕ್ ನೀರು ಹೊರಬಿಟ್ಟಿರುವ ಕಾರಣ ಘಟಪ್ರಭಾ ನದಿ ಉಕ್ಕಿ ಹರಿಯುತ್ತಿದ್ದು ಮುಧೋಳ ತಾಲೂಕಿನ ಮಾಚಕನೂರಲ್ಲಿರುವ ಹೊಳೆಬಸವೇಶ್ವರ ದೇವಸ್ಥಾನ ಜಲಾವೃತಗೊಂಡಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button