ಪ್ರಗತಿವಾಹಿನಿ ಸುದ್ದಿ; ಉತ್ತರ ಕೊರಿಯಾ: ಉತ್ತರ ಕೊರೊಯಾದಲ್ಲಿ ಇದೇ ಮೊದಲ ಬಾರಿಗೆ ಕೋವಿಡ್ ಪ್ರಕರಣ ಪತ್ತೆಯಾಗಿದ್ದು, ಅಧ್ಯಕ್ಷ ಕಿಮ್ ಜಾಂಗ್ ಉನ್ ಸರ್ಕಾರ ದೇಶಾದ್ಯಂತ ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ.
ಸ್ಟೆಲ್ಸ್ ಒಮಿಕ್ರಾನ್ ಮ್ಯುಟೆಂಟ್ ವೈರಸ್ ನಿಂದಾಗಿ ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದ್ದು, ಲಾಕ್ ಡೌನ್ ಜಾರಿಗೊಳಿಸಲಾಗಿದೆ ಎಂದು ಉತ್ತರ ಕೊರಿಯಾದ ಅಧಿಕೃತ ಕೊರಿಯನ್ ಸೆಂಟ್ರಲ್ ನ್ಯೂಸ್ ಏಜೆನ್ಸಿ ಮಾಹಿತಿ ನೀಡಿದೆ.
ವೈರಸ್ ವೇಗವಾಗಿ ಹರಡುವುದರಿಂದಾಗಿ ಸೋಂಕು ನಿಯಂತ್ರಣಕ್ಕೆ ಸರ್ಕಾರ ಕಠಿಣ ಕ್ರಮಗಳನ್ನು ಜಾರಿಗೊಳಿಸಿದೆ. ದೇಶದ ಎಲ್ಲಾ ನಗರಗಳು, ಕೌಂಟಿಗಳಲ್ಲಿ ಸಂಪೂರ್ಣವಾಗಿ ನಿರ್ಬಂಧ ಹೇರಬೇಕು ಎಂದು ಕಿಮ್ ಜಾಂಗ್ ಆದೇಶ ನೀಡಿದ್ದಾರೆ.
ಮತಾಂತರ ನಿಷೇಧ ಕಾಯ್ದೆ ಸುಗ್ರೀವಾಜ್ಞೆ ಮೂಲಕ ಜಾರಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ