Latest

ಮೊದಲ ಕೋವಿಡ್ ಕೇಸ್ ಪತ್ತೆ; ದೇಶಾದ್ಯಂತ ಲಾಕ್ ಡೌನ್ ಜಾರಿ ಮಾಡಿದ ಉತ್ತರ ಕೊರಿಯಾ ಸರ್ಕಾರ

ಪ್ರಗತಿವಾಹಿನಿ ಸುದ್ದಿ; ಉತ್ತರ ಕೊರಿಯಾ: ಉತ್ತರ ಕೊರೊಯಾದಲ್ಲಿ ಇದೇ ಮೊದಲ ಬಾರಿಗೆ ಕೋವಿಡ್ ಪ್ರಕರಣ ಪತ್ತೆಯಾಗಿದ್ದು, ಅಧ್ಯಕ್ಷ ಕಿಮ್ ಜಾಂಗ್ ಉನ್ ಸರ್ಕಾರ ದೇಶಾದ್ಯಂತ ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ.

ಸ್ಟೆಲ್ಸ್ ಒಮಿಕ್ರಾನ್ ಮ್ಯುಟೆಂಟ್ ವೈರಸ್ ನಿಂದಾಗಿ ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದ್ದು, ಲಾಕ್ ಡೌನ್ ಜಾರಿಗೊಳಿಸಲಾಗಿದೆ ಎಂದು ಉತ್ತರ ಕೊರಿಯಾದ ಅಧಿಕೃತ ಕೊರಿಯನ್ ಸೆಂಟ್ರಲ್ ನ್ಯೂಸ್ ಏಜೆನ್ಸಿ ಮಾಹಿತಿ ನೀಡಿದೆ.

Home add -Advt

ವೈರಸ್ ವೇಗವಾಗಿ ಹರಡುವುದರಿಂದಾಗಿ ಸೋಂಕು ನಿಯಂತ್ರಣಕ್ಕೆ ಸರ್ಕಾರ ಕಠಿಣ ಕ್ರಮಗಳನ್ನು ಜಾರಿಗೊಳಿಸಿದೆ. ದೇಶದ ಎಲ್ಲಾ ನಗರಗಳು, ಕೌಂಟಿಗಳಲ್ಲಿ ಸಂಪೂರ್ಣವಾಗಿ ನಿರ್ಬಂಧ ಹೇರಬೇಕು ಎಂದು ಕಿಮ್ ಜಾಂಗ್ ಆದೇಶ ನೀಡಿದ್ದಾರೆ.
ಮತಾಂತರ ನಿಷೇಧ ಕಾಯ್ದೆ ಸುಗ್ರೀವಾಜ್ಞೆ ಮೂಲಕ ಜಾರಿ

Related Articles

Back to top button