ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ವಿಧಾನ ಪರಿಷತ್ತಿನ ವಾಯವ್ಯ ಶಿಕ್ಷಕರ ಹಾಗೂ ವಾಯವ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ಜೂನ್ 13 ರಂದು ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜೂನ್ 11 ರ ಸಂಜೆ 5 ಗಂಟೆಗೆ ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದೆ. ಪ್ರಜಾ ಪ್ರತಿನಿಧಿ ಕಾಯ್ದೆ 1951 ರ ಸೆಕ್ಷನ್ 126 ರ ಪ್ರಕಾರ ಮತದಾನ ಮುಕ್ತಾಯವಾಗುವ 48 ಗಂಟೆಗಳ ಮುನ್ನ ಸಾರ್ವಜನಿಕ ಸಭೆ, ಸಮಾರಂಭ ಹಾಗೂ ಬಹಿರಂಗ ಪ್ರಚಾರ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾಗಿರುವ ನಿತೇಶ್ ಪಾಟೀಲ ತಿಳಿಸಿದ್ದಾರೆ.
ಈ ಕುರಿತು ಆದೇಶ ಹೊರಡಿಸಿರುವ ಅವರು, ಜಿಲ್ಲೆಯಾದ್ಯಂತ ರ್ಯಾಲಿ, ಬಹಿರಂಗ ಸಭೆಗಳನ್ನು ಆಯೋಜಿಸುವುದು, ಉದ್ದೇಶಿಸಿ ಮಾತನಾಡುವುದನ್ನು ನಿಷೇಧಿಸಲಾಗಿದೆ.
ಮತದಾರರ ಮೇಲೆ ಪ್ರಭಾವ ಬೀರುವಂತಹ ಯಾವುದೇ ಚಟುವಟಿಕೆಗಳನ್ನು ನಡೆಸಬಾರದು. ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲ್ಪಟ್ಟಿರುವ ಅಧಿಕಾರಿ, ಸಿಬ್ಬಂದಿ ಹೊರತುಪಡಿಸಿ, ಇತರೆ ವ್ಯಕ್ತಿಗಳು ಒಂದೇ ಸ್ಥಳದಲ್ಲಿ 5 ಕ್ಕಿಂತ ಹೆಚ್ಚು ಜನ ಸೇರುವುದನ್ನು ನಿರ್ಬಂಧಿಸಲಾಗಿದೆ. ಈ ಆದೇಶವು ಜೂನ್ 11 ರ ಸಂಜೆ 5 ಗಂಟೆಯಿಂದ ಜೂನ್ 13 ರ ಮಧ್ಯರಾತ್ರಿಯವರೆಗೆ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ವಿವರಿಸಿದ್ದಾರೆ.
ದಿವ್ಯಾಂಗರ ಮನೆ ಕನಸು ನನಸು ಮಾಡಿದ ಶಾಸಕ ಶ್ರೀಮಂತ ಪಾಟೀಲ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ