Kannada NewsLatestNationalPolitics

*ಬಿಜೆಪಿಗೆ ಅಧಿಕೃತವಾಗಿ ರಾಜೀನಾಮೆ ನೀಡಿದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ*

ಪ್ರಗತಿವಾಹಿನಿ ಸುದ್ದಿ: ಮಾಜಿ ಐಪಿಎಸ್ ಅಧಿಕಾರಿ, ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರನ್ನು ಭೇಟಿಯಾಗಿ ಅಣ್ಣಾಮಲೈ ತಮ್ಮ ರಾಜೀನಾಮೆ ಪತ್ರ ಸಲ್ಲಿಸುವ ಮೂಲಕ ಬಿಜೆಪಿಯೊಂದಿಗಿನ ತಮ್ಮ 6 ವರ್ಷಗಳ ಸುದೀರ್ಘ ಸಂಬಂಧವನ್ನು ಕೊನೆಗೊಳಿಸಿದ್ದಾರೆ.

Home add -Advt

ಎಐಎಡಿಎಂಕೆ ಪಕ್ಷವನ್ನು ಮರಳಿ ಎನ್‌ಡಿಎ ಒಕ್ಕೂಟಕ್ಕೆ ಸೇರಿಸಿಕೊಂಡ ನಂತರ, ಪಕ್ಷದ ಉನ್ನತ ನಾಯಕತ್ವವು ಅಣ್ಣಾಮಲೈ ಅವರನ್ನು ನಿರ್ಲಕ್ಷಿಸುತ್ತಿದೆ ಎಂಬ ಮಾತುಗಳು ಕೇಳಿಬಂದಿದ್ದವು. ಸ್ವಪಕ್ಷದ ಕೆಲ ನಿರ್ಧಾರಗಳ ಕುರಿತು ಅವರು ಅಸಮಾಧಾನ ಹೊಂದಿದ್ದರು. ಈ ಹಿಂದೆ ಅವರು ತಮಿಳುನಾಡು ವಿಧಾನಸಭಾ ಚುನಾವಣೆಯ ಉಸ್ತುವಾರಿ ಸ್ಥಾನ ಹಾಗೂ ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನಗಳಿಗೂ ರಾಜೀನಾಮೆ ನೀಡಿದ್ದರು.

ಅಣ್ಣಾಮಲೈ ಅವರು ಬಿಜೆಪಿ ತೊರೆದು ತಮಿಳುನಾಡಿನಲ್ಲಿ ಸ್ವತಂತ್ರವಾಗಿ ‘ಮಕ್ಕಳ್ ಶಕ್ತಿ ಇಯಕ್ಕಂ’ (ಜನಶಕ್ತಿ ಆಂದೋಲನ) ಎಂಬ ಹೊಸ ಜನಪರ ಚಳವಳಿಯನ್ನು ಅಥವಾ ಸಂಘಟನೆಯನ್ನು ಆರಂಭಿಸಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಆದರೆ ಈ ಕುರಿತು ಅಣ್ಣಾಮಲೈ ಇನ್ನೂ ಅಧಿಕೃತವಾಗಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಬಿಜೆಪಿಗೆ ಗುಡ್ ಬೈ ಹೇಳಿರುವ ಅಣ್ಣಾಮಲೈ ಮುಂದಿನ ನಡೆ ತೀವ್ರ ಕುತೂಹಲ ಮೂಡಿಸಿದೆ.

Related Articles

Back to top button