ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿಯಲ್ಲಿ ಕೊರೋನಾ ಓಟ ನಿಲ್ಲುತ್ತಿಲ್ಲ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಮತ್ತು ಸಾವಿನ ಸಂಖ್ಯೆ ಹೆಚ್ಚುತ್ತಲೇ ಸಾಗಿದೆ.
ಬುಧವಾರ ಜಿಲ್ಲೆಯಲ್ಲಿ 2234 ಜನರಿಗೆ ಸೋಂಕು ಪತ್ತೆಯಾಗುವ ಮೂಲಕ ಹಳೆಯ ದಾಖಲೆಗಳನ್ನೆಲ್ಲ ಮುರಿದಿದೆ. ಇದೇ ವೇಳೆ ಒಂದೇ ದಿನ 11 ಜನರು ಸಾವಿಗೀಡಾಗಿದ್ದಾರೆ ಎಂದು ಅಧಿಕೃತವಾಗಿ ಪ್ರಕಟಿಸಲಾಗಿದೆ.
ರಾಜ್ಯದಲ್ಲಿ ಒಟ್ಟೂ 34281 ಜನರಿಗೆ ಬುಧವಾರ ಸೋಂಕು ಪತ್ತೆಯಾಗಿದೆ. 49953 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 468 ಜನರು ಸಾವಿಗೀಡಾಗಿದ್ದಾರೆ. ಪಾಸಿಟಿವಿಟಿ ಪ್ರಮಾಣ 26.46 ಇದ್ದು, ಸಾವಿನ ಪ್ರಮಾಣ 1.36 ಇದೆ.
ಸೋಂಕಿತರ ಸಂಖ್ಯೆಯಲ್ಲಿ ಬೆಳಗಾವಿ 3ನೇ ಸ್ಥಾನದಲ್ಲಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ 833 ಜನರಿಗೆ ಸೋಂಕು ಪತ್ತೆಯಾಗಿದ್ದು 14 ಜನರು ಸಾವಿಗೀಡಾಗಿದ್ದಾರೆ. ಬೆಂಗಳೂರಿನಲ್ಲಿ 11772 ಜನರಲ್ಲಿ ಸೋಂಕು ದೃಢಪಟ್ಟಿದ್ದು, 218 ಜನರು ಸಾವಿಗೀಡಾಗಿದ್ದಾರೆ.
ರಾಜ್ಯದ ಎಲ್ಲ ಜಿಲ್ಲೆಗಳ ಸಮಗ್ರ ವಿವರಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ – 19-05-2021 HMB Kannada
ಮಕ್ಕಳ ಮೇಲೆ ಅಪ್ಪಳಿಸಬಹುದಾದ ಕೊರೋನಾ 3ನೇ ಅಲೆ: ಕೆಎಲ್ಇ ಆಸ್ಪತ್ರೆಯಲ್ಲಿ ಸಕಲ ಸಿದ್ಧತೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ