Kannada NewsKarnataka NewsLatest

ಪ್ರಾಮಾಣಿಕರಿಗೆ ಅನ್ಯಾಯವಾಗದಂತೆ ಎಚ್ಚರ ವಹಿಸಿ ಭ್ರಷ್ಟರಿಗೆ ಶಿಕ್ಷೆ ವಿಧಿಸಿ – ಗೃಹ ಸಚಿವರಿಗೆ ಚನ್ನರಾಜ ಹಟ್ಟಿಹೊಳಿ ಪತ್ರ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ​545 ಪಿ.ಎಸ್.ಐ. (ಸಿಎಲ್) ಹುದ್ದೆಗಳ ನೇಮಕಾತಿಯಲ್ಲಿ ಪ್ರಾಮಾಣಿಕರಿಗೆ ಅನ್ಯಾಯವಾಗದಂತೆ ಎಚ್ಚರ ವಹಿಸಿ ಭ್ರಷ್ಟರಿಗೆ ಶಿಕ್ಷೆ ವಿಧಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಆಗ್ರಹಿಸಿದ್ದಾರೆ.
ಈ ಕುರಿತು ಗೃಹ ಸಚಿವ ಅರಗ ಜ್ಞಾನೇಂದ್ರ ಅವರಿಗೆ ಪತ್ರ ಬರೆದಿರುವ ಅವರು, ಸಿಐಡಿ ತನಿಖೆಯ ವರದಿ ಇನ್ನೂ ಸರಕಾರಕ್ಕೆ ಸಲ್ಲಿಕೆಯಾಗಿಲ್ಲ. ಈ ಹಂತದಲ್ಲೇ ಸರಕಾರ ಇಡೀ ನೇಮಕಾತಿಯನ್ನು ರದ್ದುಪಡಿಸಿ ಮರುಪರೀಕ್ಷೆಗೆ ಮುಂದಾಗಿದೆ. ಇದರಿಂದ ​ಪ್ರಾಮಾಣಿಕವಾಗಿ ಆಯ್ಕೆಯಾದ ಬಡ ಅಭ್ಯರ್ಥಿಗಳಿಗೆ ಅನ್ಯಾಯವಾಗಿದ್ದು, ತಡೆಯಲಾರದ ಆಘಾತವಾಗಿದೆ. ಅವರು ​ ನ್ಯಾಯಾಲಯದ ಮೆಟ್ಟಿಲೇರಲು ಸಹ ಅವರು ಆರ್ಥಿಕವಾಗಿ ಸದೃಢವಾಗಿರುವುದಿಲ್ಲ. ಆದ್ದರಿಂದ ಕರ್ನಾಟಕ ಸರ್ಕಾರವು ಪ್ರಾಮಾಣಿಕ ಹಾಗೂ ಅಪ್ರಾಮಾಣಿಕರನ್ನು ಆಯ್ಕೆ ಪಟ್ಟಿಯಿಂದ ಬೇರ್ಪಡಿಸಿ ಪ್ರಾಮಾಣಿಕ ಅಭ್ಯರ್ಥಿಗಳಿಗೆ ಆದೇಶ ಪ್ರತಿಯನ್ನು ಕಾಲಮಿತಿಯೊಳಗೆ ನೀಡಿ ನ್ಯಾಯ ಒದಗಿಸಿಕೊಡಬೇಕು ಎಂದು ಅವರು ಕೋರಿದ್ದಾರೆ.
  ಭ್ರಷ್ಟರನ್ನು ಹಿಡಿದು ಶಿಕ್ಷಿಸಲಿ, ಆದರೆ ಈ ಮಧ್ಯೆ ಪ್ರಾಮಾಣಿಕ ಅಭ್ಯರ್ಥಿಗಳಿಗೆ ಅನ್ಯಾಯ ಆಗದಂತೆ ಅವರ ಹಿತಾಸಕ್ತಿಯನ್ನು ಸಹ ಪರಿಗಣಿಸಬೇಕೆಂದು ಮನವಿ ಮಾಡಿಕೊಳ್ಳುತ್ತೇನೆ. ಸರ್ಕಾರದ ನಿರ್ಧಾರದ ಮೇಲೆ ಸಾಕಷ್ಟು ಬಡ ಪ್ರಾಮಾಣಿಕ ಅಭ್ಯರ್ಥಿಗಳ ಜೀವನ ನಿಂತಿದೆ.  ಪ್ರಾಮಾಣಿಕ ಅಭ್ಯರ್ಥಿಗಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಈ ಮೂಲಕ ಕೋರುತ್ತೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button