Latest

ಶಿರಸಿಯಲ್ಲಿ ಜಗದ್ಗುರು ರೇಣುಕಾಚಾರ್ಯ ಜಯಂತಿ ಆಚರಣೆ

ಪ್ರಗತಿವಾಹಿನಿ ಸುದ್ದಿ, ಶಿರಸಿ
ಹುಕ್ಕೇರಿ ಗುರುಶಾಂತೇಶ್ವರ ಸಂಸ್ಥಾನ ಹಿರೇಮಠದ ವತಿಯಿಂದ ಶಿರಸಿಯ ವೇದ ಆರೋಗ್ಯ ಕೇಂದ್ರ ನಿಸರ್ಗ ಮನೆಯಲ್ಲಿ ಮಂಗಳವಾರ ಬೆಳಗ್ಗೆ “ಜಗದ್ಗುರು ರೇಣುಕಾಚಾರ್ಯ ಜಯಂತಿ” ಆಚರಿಸಲಾಯಿತು.
ಆಸ್ಪತ್ರೆಯ ಮುಖ್ಯಸ್ಥ ಡಾ. ವೆಂಕಟ್ರಮಣ ಹೆಗಡೆ ಶ್ರೀ ಜಗದ್ಗುರು ರೇಣುಕಾಚಾರ್ಯ ಭಾವಚಿತ್ರಕ್ಕೆ ಮತ್ತು ಮೂರ್ತಿಗೆ ರುದ್ರಾಭಿಷೇಕ ಸೇವೆಯನ್ನು ನೆರವೇರಿಸಿದರು.
 ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳ ಸಾನಿಧ್ಯದಲ್ಲಿ ಜರುಗಿದ ಮಹಾಪೂಜೆಯಲ್ಲಿ ಆಸ್ಪತ್ರೆಯ ಎಲ್ಲಾ ಸಿಬ್ಬಂದಿ ಹಾಗೂ ಶಿರಸಿಯ ವೀರಶೈವ ಲಿಂಗಾಯತ ಸಮಾಜದ ಪ್ರಮುಖರು ಪಾಲ್ಗೊಂಡಿದ್ದರು.
 ಇಂದು ಸಂಜೆ 6 ಗಂಟೆಗೆ ಡಾ.  ವೆಂಕಟರಮಣ ಹೆಗಡೆ ಅವರಿಗೆ “ಶ್ರೀ ಜಗದ್ಗುರು ರೇಣುಕಾಚಾರ್ಯ ಸದ್ಬಾವನ ಪ್ರಶಸ್ತಿ” ಪ್ರಧಾನ ಸಮಾರಂಭ ಜರುಗಲಿದೆ. ಈ ಕಾರ್ಯಕ್ರಮದಲ್ಲಿ ಬೆಂಗಳೂರು, ಕೊಟ್ಟೂರು ಸೇರಿದಂತೆ ಅನೇಕ ಮಠಾಧೀಶರು ಪಾಲ್ಗೊಳ್ಳಲಿದ್ದಾರೆ.

Related Articles

Back to top button