ಪ್ರಗತಿವಾಹಿನಿ ಸುದ್ದಿ: ಸಿಎಂ ಆಗಮನ ಹಿನ್ನೆಲೆಯಲ್ಲಿ ಪೊಲೀಸರು ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಿಸಿದ್ದರೂ ಈ ವೇಳೆ ಭದ್ರತಾ ನಿಯಮ ಉಲ್ಲಂಘಿಸಿದ ಆರೋಪದ ಮೇಲೆ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರಿಗೆ ಕೊಪ್ಪಳ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
ವಿವಿಧ ಕಾರ್ಯಕ್ರಮ ಮುಗಿಸಿ ಸಿಎಂ ಅವರು, ಬೆಂಗಳೂರಿಗೆ ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ಮಾರ್ಗವಾಗಿ ವಾಪಸ್ ಆಗುತ್ತಿದ್ದರು. ಸಿಎಂ ಆಗಮನ ಹಿನ್ನೆಲೆಯಲ್ಲಿ ಪೊಲೀಸರು ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಿಸಿ ತೆರಳಲು ಅವಕಾಶ ಮಾಡಿಕೊಟ್ಟಿದ್ದರು. ಟ್ರಾಫೀಕ್ ಜಾಮ್ ಆದ ಹಿನ್ನೆಲೆ ಡಿವೈಡರ್ ಮೇಲೆಯೇ ಕಾರು ಹತ್ತಿಸಿ ಸಿಎಂ ಬರ್ತಿದ್ದ ಮಾರ್ಗದಲ್ಲೇ ಸ್ವತಃ ಕಾರು ಚಲಾಯಿಸಿಕೊಂಡು ಜನಾರ್ಧನ ರೆಡ್ಡಿ ತೆರಳಿದ್ದಾರೆ ಎನ್ನಲಾಗಿದೆ. ಇದೆ ವೇಳೆ ಶಾಸಕರು ಸೇರಿದಂತೆ ಮೂರು ಕಾರುಗಳು ಭದ್ರತಾ ಶಿಷ್ಟಾಚಾರವನ್ನು ಸ್ಪಷ್ಟವಾಗಿ ಉಲ್ಲಂಘಿಸಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ರೆಡ್ಡಿ ಅವರು ಮುಂದಿನ ಸೀಟಿನಲ್ಲಿ ಕುಳಿತಿದ್ದರು ಮತ್ತು ಅವರ ಕಾರು ರಾಂಗ್ ಸೈಡ್‌ನಲ್ಲಿ ಬಂದ ನಂತರ ಅವರ ಬೆಂಬಲಿಗರ ಎರಡು ಕಾರುಗಳು ರೆಡ್ಡಿ ಅವರನ್ನು ಹಿಂಬಾಲಿಸಿದವು. ಇದೀಗ ಎಲ್ಲಾ ಮೂರು ಕಾರು ಮಾಲೀಕರಿಗೆ ನೋಟಿಸ್ ಜಾರಿ ಮಾಡಲಾಗಿದ್ದು, ಐಪಿಸಿ ಸೆಕ್ಷನ್ 281 ಮತ್ತು 279 ರ ಅಡಿಯಲ್ಲಿ ರಾಶ್ ಡ್ರೈವಿಂಗ್ ಮತ್ತು ರಾಂಗ್ ಸೈಡ್ ಚಾಲನೆಗಾಗಿ ಪ್ರಕರಣಗಳನ್ನು ದಾಖಲಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ