Belagavi NewsBelgaum NewsKannada NewsKarnataka NewsLatest

*ಡಿವೈ ಎಸ್ ಪಿ ಹೆಸರು ಬರೆದಿಟ್ಟು ಬೆಳಗಾವಿಯಲ್ಲಿ ವ್ಯಕ್ತಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಕುಂದಾನಗರಿ ಬೆಳಗಾವಿಯಲ್ಲಿ ವ್ಯಕ್ತಿಯೋರ್ವರು ಡಿವೈ ಎಸ್ ಪಿ, ಪಿಎಸ್​ಐ ಹೆಸರು ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನ ಬೆಂಡಿಗೇರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಬೆಂಡಿಗೇರಿ ಗ್ರಾಮದ ರವೀಂದ್ರ ದಾನವ್ವಗೋಳ ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿ. ಕೊಟ್ಟ ಹಣ ವಾಪಸ್ ಕೇಳಿದ್ದಕ್ಕೆ ಜೀವ ಬೆದರಿಕೆ ಹಾಕಿದ್ದರಿಂದಕ್ಕೆ ಹಾಗೂ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದರೆ ಅವರೂ ಕೂಡ ನಿರ್ಲಕ್ಷ ಮಾಡಿ ಬೆದರಿಕೆ ಹಾಕಿದ್ದಕ್ಕೆ ಮನನೊಂದ ರವೀಂದ್ರ ನೇಣಿಗೆ ಕೊರಳೊಡ್ಡಿದ್ದಾರೆ.

Home add -Advt

ರವೀಂದ್ರ, ಲಕ್ಷ್ಮಣ್ ಚಂದರಗಿ ಮತ್ತು ಭರಮಪ್ಪ‌ ಪೂಜಾರಿ ಎಂಬುವರಿಗೆ 8 ಲಕ್ಷ ರೂಪಾಯಿ ಸಾಲ ನೀಡಿದ್ದರು. ಆದ್ರೆ, ಈ ಹಣವನ್ನು ಲಕ್ಷ್ಮಣ್ ಚಂದರಗಿ ಮತ್ತು ಭರಮಪ್ಪ‌ ಪೂಜಾರಿ ವಾಪಸ್ ಕೊಟ್ಟಿಲ್ಲ. ಬದಲಾಗಿ ಹಣ ಕೇಳಿದ್ದಕ್ಕೆ ರವೀಂದ್ರಗೆ ಜೀವ ಬೆದರಿಕೆ ಹಾಕಿದ್ದಾರೆ. ಈ ಬಗ್ಗೆ ನ್ಯಾಯ ಕೊಡಿಸಿ ಎಂದು ರವೀಂದ್ರ, ಪಿಎಸ್‌ಐ ಆನಂದ, ಹಿಂದಿನ ಡಿವೈಎಸ್​​ಪಿ ಮುಲ್ಲಾಗೆ ಮನವಿ ಮಾಡಿದ್ದರಂತೆ. ಆದರೆ ಪೊಲೀಸರು ಸಹ ಈ ಬಗ್ಗೆ ನಿರ್ಲಕ್ಷ ಮಾಡಿದ್ದಾರೆ. ಸಾಲದ್ದಕ್ಕೆ ಪೊಲೀಸರು ಸಹ ಬೆದರಿಕೆ ಹಾಕಿದ್ದಾರೆ ಎಂದು ರವೀಂದ್ರ ಆತ್ಮಹತ್ಯೆಗೆ ಮುನ್ನ ಬರೆದಿಟ್ಟಿರುವ ಡೆತ್ ನೋಟ್ ನಲ್ಲಿ ಬರೆಯಲಾಗಿದೆ.

ಮೂಡಲಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಮೂಡಲಗಿ ಠಾಣಾ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ.


Related Articles

Back to top button