Kannada NewsKarnataka NewsLatest

ಗ್ರಾಮ ಪಂಚಾಯತಿಗಳ ಬಲವರ್ಧನೆಗೆ ನರೇಗಾ ಕೊಡುಗೆ ಅಪಾರ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

  • ಪ್ರಗತಿವಾಹಿನಿ ಸುದ್ದಿ, ಉಡುಪಿ : ಹಳ್ಳಿಗಳು ಸುಧಾರಣೆ ಆಗಬೇಕೆಂದರೆ ಮೊದಲು ಗ್ರಾಮ ಪಂಚಾಯತಿಗಳು ಸುಧಾರಣೆಯಾಗಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಕಾರ್ಕಳ ತಾಲೂಕಿನ ಮುಡಾರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿದ ಬಳಿಕ ಮಾತನಾಡಿದ ಸಚಿವರು, ಗ್ರಾಮಗಳ ಸುಧಾರಣೆಯ ದೃಷ್ಟಿಯಿಂದಲೇ ಗ್ರಾಮ ಪಂಚಾಯಿತಿ ತರಲಾಗಿದೆ. ಅದಕ್ಕೂ ಮುನ್ನ ಗ್ರಾಮ ಪಂಚಾಯತ್ ಗಳನ್ನು ಲಘುವಾಗಿ ನೋಡಲಾಗ್ತಿತ್ತು. ಯುಪಿಎ ಸರ್ಕಾರದ ಅವಧಿಯಲ್ಲಿ ನರೇಗಾ ಯೋಜನೆ ಜಾರಿಗೆ ತರುವ ಮೂಲಕ ಗ್ರಾಮ ಪಂಚಾಯತಿಗಳಿಗೆ ಶಕ್ತಿ ತುಂಬಲಾಯಿತು ಎಂದು ತಿಳಿಸಿದರು.

ನರೇಗಾ ಯೋಜನೆ ಜಾರಿಗೆ ಬರದಿದ್ದರೆ, ಗ್ರಾಮ ಪಂಚಾಯಿತಿಗಳು ಕೇವಲ ಮೂರು ಲಕ್ಷ ರೂಪಾಯಿಯಲ್ಲಿ ಕಾರ್ಯ ನಿರ್ವಹಿಸಬೇಕಾಗಿತ್ತು. ಅಲ್ಲದೆ, ರಾಜೀವ್ ಗಾಂಧಿ ಸೇವಾಕೇಂದ್ರದಿಂದ ಗ್ರಾಮ ಪಂಚಾಯಿಗಳು ಸ್ವಂತ ಕಟ್ಟಡ ನಿರ್ಮಿಸಿಕೊಳ್ಳಲು ೨೫ ಲಕ್ಷ ರೂಪಾಯಿ ಅನುದಾನ ನೀಡಲಾಗ್ತಿದೆ. ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನು ಗ್ರಾಮ ಪಂಚಾಯತಿಗೆ ನೀಡಲಾಗಿದೆ. ಹೀಗಾಗಿ ಗ್ರಾಮ ಪಂಚಾಯಿಗಳು ಶಕ್ತಿಯುತವಾಗಿ ಬೆಳೆದಿವೆ ಎಂದು ಸಚಿವರು ತಿಳಿಸಿದರು.

ಸಿಕ್ಕ ಅಧಿಕಾರವನ್ನು ಸೂಕ್ತವಾಗಿ ಬಳಸಿಕೊಂಡು, ಕೆಲಸ ಮಾಡುವುದೇ ದೊಡ್ಡ ಸವಾಲು. ಸ್ಥಳೀಯ ಸಮಸ್ಯೆಗಳಿಗೆ ಸೂಕ್ತವಾಗಿ ಸ್ಪಂದಿಸಲು ಗ್ರಾಮ ಪಂಚಾಯತಿ ವೇದಿಕೆಯಾಗಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

ಉಡುಪಿ ಜಿಲ್ಲೆ ಉದಯವಾಗಿ ಕೇವಲ ೨೫ ವರ್ಷಗಳಲ್ಲಿ ಉತ್ತಮ ಅಭಿವೃದ್ಧಿ ಕಂಡಿದೆ. ಇಲ್ಲಿಯ ಜನ ಬುದ್ದಿವಂತರು ಅನ್ನೋದಕ್ಕೆ ಇದು ಸಾಕ್ಷಿ ಎಂದರು.

ಜಿಲ್ಲೆಯ ಅಭಿವೃದ್ಧಿಯೇ ನನ್ನ ಗುರಿ, ಇಲ್ಲಿ ಯಾವುದೇ ರಾಜಕೀಯ ಬೇಡ. ಮುಡಾರು ಗ್ರಾಮ ಪಂಚಾಯತಿ ಉತ್ತಮ ಕೆಲಸಗಳನ್ನು ಮಾಡಿದೆ ಎಂದರು.

Home add -Advt

ಈ ವೇಳೆ ಕಾರ್ಕಳ ಕ್ಷೇತ್ರದ ಶಾಸಕ ಸುನೀಲ್ ಕುಮಾರ್, ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಸಿಇಒ ಪ್ರಸನ್ನ, ಉಪವಿಭಾಗಧಿಕಾರಿ ರಶ್ಮಿ, ಕಾಂಗ್ರೆಸ್ ನಾಯಕ ಉದಯಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button