Latest

ಸಿಎಂ ಮನೆಗೆ ಮುತ್ತಿಗೆ ಹಾಕಿದ ಎನ್‍ಎಸ್‍ಯುಐ ಕಾರ್ಯಕರ್ತರು

ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಸಿಇಟಿ ಹಾಗೂ ಪದವಿ ಪರೀಕ್ಷೆ ಮುಂದೂಡುವಂತೆ ಆಗ್ರಹಿಸಿ ಎನ್‍ಎಸ್‍ಯುಐ ಕಾರ್ಯಕರ್ತರು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದರೂ ಸರ್ಕಾರ ಸಿಇಟಿ ಹಾಗೂ ಅಂತಿಮ ವರ್ಷದ ಪದವಿ ಪರೀಕ್ಷೆಯನ್ನು ನಡೆಸುವುದಾಗಿ ಘೋಷಿಸಿದೆ. ಇದು ಸರ್ಕಾರದ ಬೇಜವಾಬ್ದಾರಿತನದ ವರ್ತನೆಯಾಗಿದೆ ಎಂದು ಪ್ರತಿಭಟನಾ ನಿರತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪರೀಕ್ಷೆಗಳನ್ನು ಮುಂದೂಡಬೇಕು ಎಂದು ಆಗ್ರಹಿಸಿ ಎನ್‍ಎಸ್‍ಯುಐ ಕಾರ್ಯಕರ್ತರು ಶಿವಮೊಗ್ಗದ ವಿನೋಬನಗರ ಬಡಾವಣೆಯಲ್ಲಿರುವ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲು ಮುಂದಾದ ಕಾರ್ಯಕರ್ತರನ್ನು ವಿನೋಬನಗರ ಠಾಣೆ ಪೊಲೀಸರು ವಶಪಡಿಸಿಕೊಂಡಿದ್ದಾರೆ.

Home add -Advt

Related Articles

Back to top button