Belagavi NewsBelgaum NewsKannada NewsKarnataka News

*ನುಲಿ ಚಂದಯ್ಯನವರ ಜಯಂತಿ ಅದ್ಧೂರಿಯಾಗಿ ಆಚರಣೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನುಲಿ ಚಂದಯ್ಯನವರು ಪ್ರಮುಖ ಶರಣರಲ್ಲಿ ಒಬ್ಬರಾಗಿದ್ದು, ಬಸವಣ್ಣನವರ ನೇತೃತ್ವದಲ್ಲಿ ನಡೆದ ಸಾಮಾಜಿಕ ಮತ್ತು ಧಾರ್ಮಿಕ ಸುಧಾರಣಾ ಚಳವಳಿಯಲ್ಲಿ ತಮ್ಮ ವಚನಗಳ ಮೂಲಕ ಸಮಾನತೆ, ಕಾಯಕ ಮತ್ತು ದಾಸೋಹದ ಮಹತ್ವವನ್ನು ಸಾರಿದವರು ಎಂದು ಉಪ ಮಹಾಪೌರರಾದ ಹನುಮಂತ ಕೊಂಗಾಲಿ ಅವರು ಹೇಳಿದರು.

ಜಿಲ್ಲಾಡಳಿ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ (ಆ. 28) ನಗರದ ಕುಮಾರ ಗಂಧರ್ವ ರಂಗ ಮಂದಿರದಲ್ಲಿ ಜರುಗಿದ ನುಲಿ ಚಂದಯ್ಯ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

Home add -Advt

ಭೂಮಿ ಮೇಲೆ ಹೆಣ್ಣು ಗಂಡು ಎಂಬ ಎರಡೆ ಜಾತಿ ಇದ್ದು, ಸಮಾಜದಲ್ಲಿ ಜಾತಿ ವ್ಯವಸ್ಥೆ ಸಂಪೂರ್ಣವಾಗಿ ಕೊನೆಗೊಳ್ಳಬೇಕು. ಕಠಿಣ ಪರಿಶ್ರಮದಿಂದ ಮಾತ್ರ ಫಲ ಲಭಿಸುವುದು ಎಂದು ಹೇಳಿದರು.

ಕಾರ್ಯಕ್ರಮದ ಉಪನ್ಯಾಸಕರಾಗಿ ಆಗಮಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ರವಿ ಭಜಂತ್ರಿ ಅವರು ಮಾತನಾಡಿ ಶ್ರೀ ನುಲಿ ಚಂದಯ್ಯ ನವರು ಬಸವಣ್ಣನವರ ಕಾಯಕವೇ ಕೈಲಾಸ ಎಂಬ ತತ್ವವನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದರ ಮೂಲಕ ಸಮಾಜ ಸುಧಾರಣೆಗಾಗಿ ಶ್ರಮಿಸಿದವರು ಎಂದು ಹೇಳಿದರು.

ಸಮಾಜ ನಮಗೆ ಏನು ಮಾಡಿದೆ ಅನ್ನುವುದಕ್ಕಿಂತ ಸಮಾಜಕ್ಕೆ ನಾವು ಏನು ಮಾಡಿದ್ದೇವೆ ಎನ್ನುವುದು ಬಹು ಮುಖ್ಯವಾಗಿದೆ. ತಂದೆ ತಾಯಿಗಳು ತಮ್ಮ ಆಸೆ ಆಕಾಂಕ್ಷೆಗಳನ್ನು ಬದಿಗೊತ್ತಿ ಮಕ್ಕಳ ಭವಿಷ್ಯ ರೂಪಿಸಲು ಶ್ರಮಿಸುತ್ತಾರೆ. ಅದರಂತೆ ಮಕ್ಕಳೂ ಕೂಡ ಉತ್ತಮ ಶಿಕ್ಷಣ ಪಡೆದು ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ತಿಳಿಸಿದರು.

ಪ್ರತಿಯೊಬ್ಬ ಮಗುವಿಗೂ ಶಿಕ್ಷಣ ನೀಡಿ ವಿದ್ಯಾವಂತರನ್ನಾಗಿಸಬೇಕು. ವಿದ್ಯೆ ಯಾರಿಂದಲೂ ಕದಿಯದ ಆಸ್ತಿಯಾಗಿದ್ದು, ಪ್ರತಿಯೊಬ್ಬರು ತಮ್ಮ ಮಗುವಿಗೆ ಉತ್ತಮ ಶಿಕ್ಷಣ ಒದಗಿಸಿ ಸಮಾಜದಲ್ಲಿ ಆದರ್ಶ ವ್ಯಕ್ತಿಗಳನ್ನಾಗಿಸುವಂತೆ ಮಾಡಬೇಕು ಎಂದರು.

ನಿಷ್ಠೆಯಿಂದ ಕಾಯಕ ಮಾಡುವುದರ ಜೊತೆಗೆ ಯಾವುದೇ ವೃತ್ತಿಯನ್ನು ಕೀಳಾಗಿ ಕಾಣಬಾರದು ಎಂಬ ನುಲಿ ಚಂದಯ್ಯನವರ ಆದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ರವಿ ಭಜಂತ್ರಿ ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಉಪ ಆಯುಕ್ತ ಉದಯಕುಮಾರ್ ತಳವಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಸಿಪಿಐ ಜೆ. ಎಂ. ಕಾಲಿಮಿರ್ಜಿ, ನುಲಿ ಸಮಾಜದ ಜಿಲ್ಲಾ ಅಧ್ಯಕ್ಷರು ಚಂದ್ರಶೇಖರ, ಉಪಾಧ್ಯಕ್ಷರು ಯಲ್ಲಪ್ಪ ಭಜಂತ್ರಿ, ನಿವೃತ್ತ ಬಿಇಒ ಎಂ.ಬಿ ಭಜಂತ್ರಿ, ಮಹಿಳಾ ಸಮಿತಿ ಜಿಲ್ಲಾ ಅಧ್ಯಕ್ಷರು ಯಶೋಧಾ ಭಜಂತ್ರಿ, ಮುತ್ತಪ್ಪ ಭಜಂತ್ರಿ, ಬಹದ್ದೂರ್ ಚಂದ್ರಪ್ಪ ಭಜಂತ್ರಿ, ಮಾರುತಿ ಭಜಂತ್ರಿ ಸೇರಿದಂತೆ ಸಮಾಜದ ಮುಖಂಡರು, ಗಣ್ಯರುಗಳು ಉಪಸ್ಥಿತರಿದ್ದರು.

ಭವ್ಯ ಮೆರವಣಿಗೆ

ಕಾರ್ಯಕ್ರಮಕ್ಕೂ ಮುನ್ನ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ರಾಣಿ ಚನ್ನಮ್ಮ ವೃತ್ತದಲ್ಲಿ ಶ್ರೀ ನುಲಿ ಚಂದಯ್ಯ ನವರ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸುವುದರ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ವಿವಿಧ ಕಲಾ ತಂಡಗಳೊಂದಿಗೆ ಮೆರವಣಿಗೆಯು ಕೃಷ್ಣದೇವರಾಯ ವೃತ್ತದ ಮೂಲಕ ಕುಮಾರ ಗಂಧರ್ವ ಕಲಾ ಮಂದಿರಕ್ಕೆ ತಲುಪಿತು.

Related Articles

Back to top button