
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಪ್ರವಾದಿ ಮೊಹಮ್ಮದ್ ಪೈಗಂಬರ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಮಾಜಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ವಿರುದ್ಧ ಪ್ರತಿಭಟನೆ ನಡೆಸಿದ್ದ ಅನಿವಾಸಿಗಳನ್ನು ಗಡಿಪಾರು ಮಾಡಲು ಕುವೈತ್ ಸರ್ಕಾರ ನಿರ್ಧಾರಿಸಿದೆ.
ನೂಪುರ್ ಶರ್ಮಾ ಹೇಳಿಕೆ ಖಂಡಿಸಿ ದೇಶ-ವಿದೇಶಗಳಲ್ಲಿ ಮುಸ್ಲಿಂ ಮುಖಂಡರು ಪ್ರತಿಭಟನೆ ನಡೆಸಿದ್ದು, ಈ ವೇಳೆ ಕುವೈತ್ ನಲ್ಲಿ ಪ್ರತಿಭಟನೆ ನಡೆಸಿದ ಅನಿವಾಸಿಗಳನ್ನು ಬಂಧಿಸುವಂತೆ ಅಲ್ಲಿನ ಸರ್ಕಾರ ಆದೇಶ ನೀಡಿದೆ.
ಕುವೈತ್ ನಲ್ಲಿರುವವರು ಕುವೈತ್ ಕಾನೂನು ಗೌರವಿಸಬೇಕು. ಇಲ್ಲಿ ಯಾವುದೇ ಪ್ರತಿಭಟನೆಗಳಿಗೆ ಅವಕಾಶವಿಲ್ಲ ಎಂಬ ನಿಯಮವಿದೆ. ಆದರೂ ಕಾನೂನು ಉಲ್ಲಂಘನೆ ಮಾಡಿ ಪ್ರತಿಭಟನೆ ನಡೆಸಿದವರನ್ನು ಗಡಿಪಾರು ಮಾಡಲಾಗುವುದು ಎಂದು ಸರ್ಕಾರ ಹೇಳಿದ್ದಾಗಿ ಮೂಲಗಳು ತಿಳಿಸಿವೆ.
ಈಗಾಗಲೇ ಪ್ರತಿಭಟನೆಯಲ್ಲಿ ಭಾಗಿಯಾದವರನ್ನು ಅಲ್ಲಿನ ಅಧಿಕಾರಿಗಳು ಗುರುತಿಸಲು ಮುಂದಾಗಿದ್ದು, ವೀಸಾ ರದ್ದುಗೊಳಿಸಲು ಚಿಂತನೆ ನಡೆಸಿದ್ದಾರೆ. ಒಂದು ವೇಳೆ ಕುವೈತ್ ನಾಗರಿಕರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರೆ ಅವರ ವಿರುದ್ಧವೂ ಕಠಿಣ ಕ್ರಮಕ್ಕೆ ಅಲ್ಲಿನ ಸರ್ಕಾರ ನಿರ್ಧರಿಸಿದೆ.
ED ಕಚೇರಿಗೆ ವಿಚಾರಣೆಗೆ ಹಾಜರಾದ ರಾಹುಲ್ ಗಾಂಧಿ