
ಪ್ರಗತಿವಾಹಿನಿ ಸುದ್ದಿ; ಮುಂಬೈ: ನೂಪುರ್ ಶರ್ಮಾಗೆ ಬೆಂಬಲ ವ್ಯಕ್ತಪಡಿಸಿದ್ದ ಮತ್ತೋರ್ವ ವ್ಯಕ್ತಿ ಔಷಧಿ ಅಂಗಡಿ ಮಾಲೀಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ನೂಪುರ್ ಶರ್ಮಾ ಬೆಂಬಲಿಸಿದ್ದಕ್ಕೆ ಉದಯ್ ಪುರದಲ್ಲಿ ಟೈಲರ್ ಕನ್ನಯ್ಯ ಲಾಲ್ ನನ್ನು ಬರ್ಬರವಾಗಿ ಹತ್ಯೆಗೈಯ್ಯಲಾಗಿತ್ತು. ಇದೀಗ ಮಹಾರಾಷ್ಟ್ರದಲ್ಲಿ ಔಷಧಿ ಅಂಗಡಿ ಮಾಲೀಕರೊಬ್ಬರನ್ನು ಕತ್ತು ಸೀಳಿ ಹತ್ಯೆ ಮಾಡಿದ ಬಗ್ಗೆ ವರದಿಯಾಗಿದೆ. ಈ ಕುರಿತು ಎನ್ ಐಎ ತನಿಖೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆದೇಶ ನೀಡಿದ್ದಾರೆ.
ಜೂನ್ 21ರಂದು ಮಹಾರಾಷ್ಟ್ರದ ಅಮರಾವತಿಯಲ್ಲಿ ಈ ಕೊಲೆ ನಡೆದಿದೆ. ನೂಪುರ್ ಶರ್ಮಾ ಅವರಿಗೆ ಬೆಂಬಲಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ್ದಕ್ಕೆ ಅಂಗಡಿ ಮಾಲೀಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಆದರೆ ಪೊಲೀಸರು ಈ ಪ್ರಕರಣ ಮುಚ್ಚಿಹಾಕಲು ಯತ್ನಿಸಿದ್ದರು ಎಂದು ಬಿಜೆಪಿ ನಾಯಕ ತುಷಾರ್ ಭಾರ್ತಿಯಾ ಆರೋಪಿಸಿದ್ದಾರೆ.
ಜಾಲತಾಣದಲ್ಲಿ ನೂಪುರ ಶರ್ಮಾ ಬೆಂಬಲಿಸಿದ ಮೆಡಿಕಲ್ ಶಾಪ್ ಮಾಲೀಕನ ಹತ್ಯೆ
ಗರ್ಭಪಾತದ ಮಾತ್ರೆ ಸೇವಿಸಿ ಸಾವು ಕಂಡ ಬಾಲಕಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ