Kannada NewsKarnataka NewsLatest

ವೈದ್ಯಕೀಯ ಕ್ಷೇತ್ರದಲ್ಲಿ ನರ್ಸಿಂಗ್ ಕಾಳಜಿ ಅತ್ಯಂತ ಮುಖ್ಯ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ವೈದ್ಯಕೀಯ ಕ್ಷೇತ್ರದಲ್ಲಿ ನರ್ಸಿಂಗ್ ಕಾಳಜಿ ಅತ್ಯಂತ ಮುಖ್ಯವಾಗಿದೆ. ಆಸ್ಪತ್ರೆಯಲ್ಲಿರುವ ರೋಗಿಗಳೊಂದಿಗೆ ಸದಾ ಒಡನಾಟದಲ್ಲಿರುವವರು ನರ್ಸಿಂಗ್ ಸಿಬ್ಬಂದಿ. ಅವರ ಕಾಳಜಿ ಶ್ಲಾಘನೀಯವಾದದ್ದು, ಯುವಕರು ಇತ್ತೀಚಿನ ದಿನಗಳಲ್ಲಿ ನರ್ಸಿಂಗ್ ಕ್ಷೇತ್ರಕ್ಕೆ ಆಗಮಿಸುತ್ತಿದ್ದು, ರೋಗಿಗಳ ಸೇವೆಯ ಜೊತೆಗೆ ಸಂಶೋಧನೆಯಲ್ಲಿಯೂ ಪಾಲ್ಗೊಳ್ಳಬೇಕೆಂದು ಕಾಹೆರ ಕುಲಪತಿ ಡಾ. ವಿವೇಕ ಸಾವೋಜಿ ಅವರಿಂದಿಲ್ಲಿ ಹೇಳಿದರು.

ಕಾಹೆರನ ನರ್ಸಿಂಗ್ ವಿಜ್ಞಾನ ಮಹಾವಿದ್ಯಾಲಯದ ವಾರ್ಷಿಕ ದಿನಾಚರಣೆಯ ನ್ಯಾಸ -೨೦೨೦ ಕಾರ‍್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವೈದ್ಯಕೀಯ ಕ್ಷೇತ್ರವು ಅತ್ಯಂತ ಸವಾಲಿನಿಂದ ಕೂಡಿದ್ದು, ಅದರಲ್ಲಿ ಯಶಸ್ಸು ಗಳಿಸಲು ಸದಾ ಕಾರ‍್ಯಪ್ರವೃತ್ತರಾಗಿರಬೇಕು. ಗ್ರಾಮೀಣ ಪ್ರದೇಶದಲ್ಲಿಯೂ ವೈದ್ಯಕೀಯ ಸೇವೆ ಕುರಿತು ಜಾಗೃತಿ ಮೂಡಿಸಬೇಕಾಗಿದೆ. ಸ್ನಾತ್ತಕೋತ್ತರ ಹಾಗೂ ಸಂಶೋಧನೆಯಲ್ಲಿ ತೊಡಗಿ ನರ್ಸಿಂಗ್ ವ್ಯವಸ್ಥೆಯನ್ನು ಇನ್ನಷ್ಟು ಸುಧಾರಣೆಗೊಳ್ಳಲು ತಾವು ಮುಂದಾಗಬೇಕೆಂದು ಕರೆ ನೀಡಿದರು.
ಕಾಹೆರನ ಕುಲಸಚಿವ ಡಾ. ವಿ ಎ ಕೋಠಿವಾಲೆ ಅವರು ಮಾತನಾಡಿದರು. ನರ್ಸಿಂಗ್ ಮಹಾವಿದ್ಯಾಲಯದ ಪ್ರಾಚಾರ‍್ಯೆ ಡಾ. ಸುಧಾ ರೆಡ್ಡಿ ಅವರು ಅತಿಥಿಗಳನ್ನು ಸ್ವಾಗತಿಸಿ, ಪರಿಚಯಿಸಿದರು. ಇದೇ ಸಂದರ್ಭದಲ್ಲಿ ನ್ಯಾಸ್ -೨೦೨೦ ಸ್ಮರಣಿಕೆಯನ್ನು ಬಿಡುಗಡೆಗೊಳಿಸಲಾಯಿತು. ಮಾರ್ಸಿಯಲ್ ಡಾಕೋಸ್ಟಾ ಅವರು ವಂದಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button