Kannada NewsKarnataka NewsLatest

*ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ: ನರ್ಸಿಂಗ್ ರಜಿಸ್ಟ್ರಾರ್ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಮಹಿಳೆಯನ್ನು ಬಲವಂತವಾಗಿ ತಬ್ಬಿಕೊಂಡು, ಮುತ್ತುಕೊಟ್ಟು, ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ರಾಜ್ಯ ನರ್ಸಿಂಗ್ ಕೌನ್ಸಿಲ್ ರಿಜಿಸ್ಟ್ರಾರ್ ನನ್ನು ಬಂಧಿಸಿರುವ ಗಹ್ಟನೆ ನಡೆದಿದೆ.

ರಿಜಿಸ್ಟ್ರಾರ್ ಮಲ್ಲು ಬಂಧಿತ ಆರೋಪಿ. ನೊಂದ ಸಂತ್ರಸ್ತೆ ಉಪ್ಪಾರಪೇಟೆ ಪೊಈಸ್ ಠಾಣೆಯಲ್ಲಿ ರಿಜಿಸ್ಟ್ರಾರ್ ಮಲ್ಲು ವಿರುದ್ಧ ದೂರು ದಾಖಲಿಸಿದ್ದರು. ಗಾಂಧಿನಗರದಲ್ಲಿ ನರ್ಸಿಂಗ್ ಕೌನ್ಸಿಲ್ ಕಚೇರಿಯಲ್ಲಿ ಕೆಲಸ ಮಾಡುವಾಗ ಮಲ್ಲು ಲೈಂಗಿಕ ಕಿರುಕುಳ ನೀಡಿದ್ದಾರೆ. ಅಂಗಾಂಗ ಮುಟ್ಟಿ, ಎಳೆದಾಡಿ ದೌರ್ಜನ್ಯವೆಸಗಿದ್ದಾರೆ. ಕಾರಿನ ಬಳಿ ಬಲವಂತವಾಗಿ ತಬ್ಬಿಕೊಂಡು ಮುತ್ತುಕೊಟ್ಟಿದ್ದಾರೆ ಅಲ್ಲದೇ ಬಲವಂತವಾಗಿ ಕಾರು ಹತ್ತಿಸಿಕೊಳ್ಳಲು ಯತ್ನಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಸಂತ್ರಸ್ತೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಉಪ್ಪಾರಪೇಟೆ ಠಾಣೆಯಲ್ಲಿ ಆರೋಪಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ರಿಜಿಸ್ಟ್ರಾರ್ ಮಲ್ಲುನನ್ನು ಬಂಧಿಸಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button