ಪ್ರಗತಿವಾಹಿನಿ ಸುದ್ದಿ: ನರ್ಸಿಂಗ್ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಹಾಸ್ಟೇಲ್ ನಲ್ಲಿಯೇ ಆತ್ಮಹಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಮದರ್ ಥೆರೇಸಾ ನರ್ಸಿಂಗ್ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಹಾಸ್ಟೇಲ್ ನಲ್ಲಿಯೇ ನೇಣಿಗೆ ಕೊರಳೊಡ್ಡಿದ್ದಾಳೆ. ಪಶ್ಚಿಮ ಬಂಗಾಳ ಮೂಲದ ದಿಯಾ ಮಂಡೋಲ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.
ಕೌಟುಂಬಿಕ ಕಲಹದಿಂದ ನೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಜಾಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ