
ಪ್ರಗತಿವಾಹಿನಿ ಸುದ್ದಿ: ಮನೆಯಲ್ಲಿಯೇ ನೇಣು ಬಿಗಿದುಕೊಂಡು ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.
ಕೊಳ್ಳೆಗಾಲ ತಾಲೂಕಿನ ಹೊಸ ಹಂಪಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಅಂತಿಮ ವರ್ಷದ ನರ್ಸಿಂಗ್ ಓದುತ್ತಿದ್ದ ವಿದ್ಯಾರ್ಥಿನಿ ಪ್ರಿಯಾಂಕಾ ಆತ್ಮಹತ್ಯೆ ಮಾಡಿಕೊಂಡವಳು.
ಮಂಡ್ಯ ಜಿಲ್ಲೆಯ ಕೆ.ಎಂ.ದೊಡ್ಡಿ ನರ್ಸಿಂಗ್ ಕಾಲೇಜಿನಲ್ಲಿ ಓದುತ್ತಿದ್ದಳು. ಇನ್ನು ಎರಡು ತಿಂಗಳು ಮುಗಿದಿದ್ದರೆ ನರ್ಸಿಂಗ್ ಕೋರ್ಸ್ ಮುಗಿಯುತ್ತಿತ್ತು. ಅಷ್ಟರಲ್ಲಿ ಯುವತಿ ದುಡುಕಿನ ನಿರ್ಧಾರ ಕೈಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.




