ಪ್ರಗತಿವಾಹಿನಿ ಸುದ್ದಿ, ಹುಬ್ಬಳ್ಳಿ :
ವಾಯವ್ಯ ಕರ್ನಾಟಕ ರಸ್ತೆ ಸಂಸ್ಥೆಗೆ 3,307 ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ವಾಯುವ್ಯ ಕರ್ನಾಟಕ ರಸ್ತೆ ಸಂಸ್ಥೆ ಅಧ್ಯಕ್ಷ ಶಿವರಾಮ್ ಹೆಬ್ಬಾರ್ ತಿಳಿಸಿದ್ದಾರೆ.
ಸರ್ಕಾರದಿಂದ ನೇಮಕಾತಿಗೆ ಒಪ್ಪಿಗೆ ಸಿಕ್ಕಿದ್ದು, ಶೀಘ್ರದಲ್ಲಿಯೇ ನೇಮಕಾತಿ ಅಧಿಸೂಚನೆ ಪ್ರಕಟಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ. 2,555 ಚಾಲಕರು, 413 ನಿರ್ವಾಹಕರು, 259 ಚಾಲಕ/ನಿರ್ವಾಹಕರು ಹಾಗೂ 80 ಸಹಾಯಕ ಸಂಚಾರ ನಿರೀಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.
ಸಂಸ್ಥೆಯ ಆದಾಯ ದಿನಕ್ಕೆ 5.70 ಕೋಟಿ ಇದೆ. ಖರ್ಚು 6.30 ಕೋಟಿ ಇದೆ. ಪ್ರತಿವರ್ಷ 4.95 ಲಕ್ಷ ವಿದ್ಯಾರ್ಥಿಗಳು ಬಸ್ ಪಾಸ್ ಪಡೆಯುತ್ತಾರೆ. 5 ವರ್ಷಗಳ ಬಸ್ ಪಾಸ್ ರಿಯಾಯಿತಿಯ 751 ಕೋಟಿ ಮೊತ್ತ ಸರ್ಕಾರದಿಂದ ಬರಬೇಕಿದೆ ಎಂದು ಶಿವರಾಮ್ ಹೆಬ್ಬಾರ್ ಹೇಳಿದರು.
ಕೆಎಸ್‌ಆರ್‌ಟಿಸಿಯ ಕ್ಲಾಸ್ 1 ಮತ್ತು ಕ್ಲಾಸ್ 2 ಅಧಿಕಾರಿಗಳನ್ನು ಯೋಜನೆ ಮೇರೆಗೆ ಬೇರೆ ಸಾರಿಗೆ ನಿಗಮಗಳಿಗೆ ವರ್ಗಾವಣೆ ಮಾಡುವಂತಿಲ್ಲ. ಅಂತರ್ ನಿಗಮ ವರ್ಗಾವಣೆಯ ಸಾಧಕ-ಬಾಧಕಗಳ ಬಗ್ಗೆ ಅಧ್ಯಯನ ನಡೆಸಲು ಸಮಿತಿಯನ್ನು ರಚನೆ ಮಾಡಲಾಗಿದೆ’ ಎಂದು ಹೇಳಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ