
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನ ಪರಿಷತ್ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 13ರಂದು ಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ತಮ್ಮ ಹಕ್ಕು ಚಲಾಯಿಸಲು ಅನುಕೂಲವಾಗುವಂತೆ ಸಾಂದರ್ಭಿಕ ರಜೆ ಪಡೆಯಲು ಅವಕಾಶ ನೀಡಲಾಗಿದೆ.
ವಾಯವ್ಯ ಪದವೀಧರ ಕ್ಷೇತ್ರ, ದಕ್ಷಿಣ ಪದವೀಧರ ಕ್ಷೇತ್ರ ಹಾಗೂ ವಾಯವ್ಯ ಶಿಕ್ಷಕರ ಕ್ಷೇತ್ರ, ಪಶ್ಚಿಮ ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 13ರಂದು ಮತದಾನ ನಡೆಯಲಿದೆ. ಈ ಕ್ಷೇತ್ರಗಳಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಾಲಾ, ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾ ಸಂಸ್ಥೆಗಳು, ರಾಷ್ಟ್ರೀಕೃತ ಹಾಗೂ ಇತರ ಬ್ಯಾಂಕ್ ಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆ, ಕೈಗಾರಿಕಾ ಹಾಗೂ ಸಹಕಾರಿ ರಂಗದ ಸಂಘ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾಯಂ ಹಾಗೂ ದಿನಗೂಲಿ ಕಾರ್ಯ ನಿರ್ವಹಿಸುವ ಪದವೀಧರರು ಹಾಗೂ ಶಿಕ್ಷಕರ ಮತದಾನಕ್ಕೆ ಅನುಕೂಲವಾಗುವಂತೆ ಜೂನ್ 13ರಂದು ಸೋಮವಾರ ಸಾಂದರ್ಭಿಕ ರಜೆ ಮಂಜೂರು ಮಾಡಲು ಆದೇಶಿಸಲಾಗಿದೆ.
ಈ ಕುರಿತು ಸರ್ಕಾರದ ಅಧೀನ ಕಾರ್ಯದರ್ಶಿ ಅಪೇಕ್ಷಾ ಸತೀಶ್ ಪವಾರ್ ಆದೇಶ ಹೊರಡಿಸಿದ್ದಾರೆ.
ರೆಡ್ ಹ್ಯಾಂಡ್ ಆಗಿ ACB ಬಲೆಗೆ ಬಿದ್ದ ಕಾನ್ ಸ್ಟೇಬಲ್