Kannada NewsLatestNational
*ಹೈಕೋರ್ಟ್ ಬಳಿ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಮಹಿಳೆ*

ಪ್ರಗತಿವಾಹಿನಿ ಸುದ್ದಿ: ಮಹಿಳೆಯೊಬ್ಬರು ಹೈಕೋರ್ಟ್ ಬಳಿ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚ್ಜಿದ ಘಟನೆ ಒಡಿಶಾದಲ್ಲಿ ನಡೆದಿದೆ.
ಒಡಿಶಾದ ಹೈಕೋರ್ಟ್ ಎದುರು ನಿಲ್ಲಿಸಿದ್ದ ವಾಹನಗಳಿಗೆ ಮಹಿಳೆ ಬೆಂಕಿ ಹಚ್ಚಿರುವ ವಿಡಿಯೋ ವೈರಲ್ ಆಗಿದೆ. ಒಡಿಶಾದ ಕಟಕ್‌ನಲ್ಲಿರುವ ಒರಿಸ್ಸಾ ಹೈಕೋರ್ಟ್ ಬಳಿ ಈ ಘಟನೆ ನಡೆದಿದೆ. ಪ್ರಧಾನಿ ನರೇಂದ್ರ ಮೋದಿಯವರ ಗಮನ ಸೆಳೆಯಲು ಈ ರೀತಿ ಮಾಡಿದ್ದಾಗಿ ಮಹಿಳೆ ಪೊಲೀಸರಿಗೆ ತಿಳಿಸಿದ್ದಾಳೆ.
ಮಹಿಳೆಯನ್ನು ಮಿನಾತಿ ಸಾಹು ಎಂದು ಗುರುತಿಸಲಾಗಿದ್ದು, ಸದ್ಯ ಆಕೆಯನ್ನು ಬಂಧಿಸಲಾಗಿದೆ. ವಾಹನಗಳಿಗೆ ಬೆಂಕಿ ಹಚ್ಚಲು ಪೆಟ್ರೋಲ್ ಬಳಸಿದ್ದಾಗಿ ಆಕೆ ಒಪ್ಪಿಕೊಂಡಿದ್ದಾಳೆ. ಮೊದಲು ಎರಡು ಬೈಕ್ಗಳಿಗೆ ಬೆಂಕಿ ಹಚ್ಚಿದ್ದು, ನಂತರ ಕಾರಿಗೂ ಬೆಂಕಿ ಆವರಿಸಿದೆ. ಮಹಿಳೆ ಮಾನಸಿಕ ಅಸ್ವಸ್ಥೆಯಾಗಿರಬಹುದು ಎಂದು ಶಂಕಿಸಲಾಗಿದೆ.




