Kannada NewsLatest

ಮತ್ತೆ ನೀತಿ ಸಂಹಿತೆ ಉಲ್ಲಂಘಿಸಿದ್ರಾ ಶಾಸಕ ಅನಿಲ್ ಬೆನಕೆ?

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ವಿಧಾನ ಪರಿಷತ್ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಬಿರುಸುಗೊಂಡಿದ್ದು, ಈ ನಡುವೆ ಬಿಜೆಪಿ ಶಾಸಕ ಅನಿಲ್ ಬೆನಕೆ ಮತ್ತೆ ನೀತಿ ಸಂಹಿತೆ ಉಲ್ಲಂಘಿಸಿರುವ ಆರೋಪ ಕೇಳಿಬಂದಿದೆ.

ಬೆಳಗಾವಿಯ ವಿಶ್ವೇಶ್ವರಯ್ಯ ನಗರದಲ್ಲಿರುವ ಮತಗಟ್ಟೆಗೆ ಆಗಮಿಸಿದ ಶಾಸಕ ಅನಿಲ್ ಬೆನಕೆ ಮತಗಟ್ಟೆ ಅಧಿಕಾರಿಗಳ ಜತೆ ಚರ್ಚೆ ನಡೆಸಿದ್ದಾರೆ ಅಲ್ಲದೇ ಮೊಬೈಲ್ ನಲ್ಲಿಯೂ ಮಾತನಾಡಿದ್ದಾರೆ. ಈ ಮೂಲಕ ಶಾಸಕರು ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎನ್ನಲಾಗಿದೆ.

Home add -Advt

ಮತಗಟ್ಟೆಗೆ ಮೊಬೈಲ್ ಫೋನ್ ನಿಷೇಧಿಸಲಾಗಿದೆಯಲ್ಲದೇ ಕಡ್ಡಾಯವಾಗಿ ಮಾಸ್ಕ್ ಧರಿಸಿ ಕೋವಿಡ್ ನಿಯಮಗಳನ್ನು ಪಾಲಿಸಿ ಮತದಾನ ಮಾಡಬೇಕು ಎಂದು ಸೂಚಿಸಲಾಗಿದೆ. ಆದರೆ ಮಾಸ್ಕ್ ಇಲ್ಲದೇ, ಮೊಬೈಲ್ ಫೋನ್ ನಲ್ಲಿ ಮಾತನಾಡುತ್ತ ಮತಗಟ್ಟೆಗೆ ಆಗಮಿಸಿದ ಶಾಸಕರು, ಮತಗಟ್ಟೆ ಅಧಿಕಾರಿಗಳ ಜತೆ ಮಾತುಕತೆ ನಡೆಸಿದ್ದಾರೆ. ಈ ಮೂಲಕ ಮತದಾರರನ್ನು ಸೆಳೆಯುವ ಯತ್ನ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಈ ನಡುವೆ ಚಿಕ್ಕೋಡಿಯಲ್ಲಿ ಬಿರುಸಿನ ಮತದಾನ ನಡೆದಿದ್ದು, ಇಲ್ಲಿನ ಪಟ್ಟಣದ ತಾಲೂಕು ಪಂಚಾಯತ್ ಕಚೇರಿ ಮತಗಟ್ಟೆಯಲ್ಲಿ ಸರತಿ ಸಾಲಿನಲ್ಲಿ ನಿಂತು ಮತದಾರರು ಹಕ್ಕು ಚಲಾಯಿಸಿದ್ದಾರೆ.
ವಿಧಾನ ಪರಿಷತ್ ಪದವಿಧರ-ಶಿಕ್ಷಕರ ಕ್ಷೇತ್ರ ಚುನಾವಣೆ; ಹಕ್ಕು ಚಲಾಯಿಸಲು ಸರತಿ ಸಾಲಿನಲ್ಲಿ ನಿಂತ ಮತದಾರರು

Related Articles

Back to top button