*ಖ್ಯಾತ ರ್ಯಾಪರ್ ಅಭಿನವ್ ಸಿಂಗ್ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಓಡಿಶಾದ ಖ್ಯಾತ ರ್ಯಾಪರ್ ಅಭಿನವ್ ಸಿಂಗ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಕಾಡುಬೀಸನಹಳ್ಳಿ ಅಪಾರ್ಟ್ ಮೆಂಟ್ ನಲ್ಲಿ ನಡೆದಿದೆ. ಖ್ಯಾತ ಗಾಯಕರಾಗಿರುವ ಅಭಿನವ್ ಸಿಂಗ್ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವೃತ್ತಿಯಲ್ಲಿ ಇಂಜಿನಿಯರ್ ಆಗಿದ್ದ ಅಭಿನವ್ ಸಿಂಗ್, ಏಕಾಏಕಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪತ್ನಿ ಕಿರುಕುಳದಿಂದ ಆತ್ಮಹತ್ಯೆ ಎಂದು ಅಭಿನವ್ ಕುಟುಂಬದವರು ಆರೋಪಿಸಿದ್ದಾರೆ. ಮಾರತ್ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.