ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಒಡಿಶಾದ ಬಾಲಸೋರ್ ನಲ್ಲಿ ಸಂಭವಿಸಿದ ರೈಲು ದುರಂತದಲ್ಲಿ ಸಾವಿಗೀಡಾದವರ ಸಂಖ್ಯೆ 250 ದಾಟಿದೆ ಎಂದು ಅಂದಾಜಿಸಲಾಗಿದೆ. 900ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರೈಲು ದುರಂತದ ಹಿನ್ನೆವಲೆಯಲ್ಲಿ 90ಕ್ಕೂ ಹೆಚ್ಚು ರೈಲುಗಳನ್ನು ರದ್ದುಪಡಿಸಲಾಗಿದೆ ಇಲ್ಲವೇ ಮಾರ್ಗ ಬದಲಿಸಲಾಗಿದೆ. ದುರಂತದ ಕುರಿತು ಉನ್ನತ ಮಟ್ಟದ ತನಿಖೆಗೆ ಕೇಂದ್ರ ಸರಕಾರ ಆದೇಶಿಸಿದೆ.
ಪ್ರಧಾನಿ ಮೋದಿ ಉನ್ನತ ಮಟ್ಟದ ಸಭೆ ಕರೆದಿದ್ದು, ಸ್ಥಳಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ.
ಈ ಮಧ್ಯೆ, ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸಲು ಸಚಿವ ಸಂತೋಷ್ ಲಾಡ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನಿಯೋಜಿಸಿದ್ದಾರೆ.
ಘಟನೆ ಕುರಿತಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಂದ ವರದಿ ಕೇಳಿದ ಬಳಿಕ ಸಂಬಂಧಪಟ್ಟ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.
ಬಳಿಕ ತಕ್ಷಣ ಸ್ಥಳಕ್ಕೆ ತೆರಳಿ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸಲು ಹಾಗೂ ಅಗತ್ಯ ನೆರವನ್ನು ಒದಗಿಸಲು ಸೂಚನೆ ನೀಡಿದ್ದಾರೆ.
ಸಂತೋಷ್ ಲಾಡ್ ಅವರ ಜತೆಗೆ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ ಮನೋಜ್ ರಾಜನ್ ಸೇರಿ ಇತರೆ ಅಧಿಕಾರಿಗಳ ತಂಡ ಘಟನಾ ಸ್ಥಳಕ್ಕೆ ಹೊರಟಿದೆ.
*ಒಡಿಸ್ಸಾ ರೈಲು ದುರಂತದಲ್ಲಿ ಮಡಿದವರ ಕುಟುಂಬಗಳಿಗೆ ಡಿಸಿಎಂ ಡಿ ಕೆ ಶಿವಕುಮಾರ್ ಸಂತಾಪ*
230 ಕ್ಕೂ ಹೆಚ್ಚು ಮಂದಿಯನ್ನು ಬಲಿ ತೆಗೆದುಕೊಂಡಿರುವ ಒಡಿಸ್ಸಾ ರೈಲು ದುರಂತದ ಬಗ್ಗೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ದಿಗ್ಬ್ರಮೆ ವ್ಯಕ್ತಪಡಿಸಿದ್ದಾರೆ.
ಬಾಲಾ ಸೊರ್ ನಲ್ಲಿ ಸಂಭವಿಸಿರುವ ಅಪಘಾತದಲ್ಲಿ ಮೃತಪಟ್ಟವರ ಆತ್ಮಕ್ಕೆ ಚಿರಶಾಂತಿ ಕೋರಿದ್ದಾರೆ. ಅವರ ಕುಟುಂಬ ಸದಸ್ಯರಿಗೆ ತೀವ್ರ ಸಂತಾಪ ಸೂಚಿಸಿದ್ದಾರೆ.
ದುರಂತದಲ್ಲಿ ಗಾಯಗೊಂಡವರು ಬೇಗ ಗುಣಮುಖರಾಗಲಿ ಎಂದು ಅವರು ಹಾರೈಸಿದ್ದಾರೆ.
ರಾಜ್ಯ ತುರ್ತು ನಿರ್ವಹಣಾ ಕೇಂದ್ರ (SEOC)ದಲ್ಲಿ ನಾಗರಿಕರ ಅನುಕೂಲಕ್ಕಾಗಿ ಸಹಾಯ ವಾಣಿ ಸಂಖ್ಯೆ 1070, 080-22253707, 080-22340676 ತೆರೆಯಲಾಗಿದೆ.
https://pragati.taskdun.com/yeshwantpur-train-collides-with-derailed-train-more-than-50-dead-more-than-350-injured/
https://pragati.taskdun.com/a-mother-who-killed-her-son-and-ate-meat/
https://pragati.taskdun.com/a-man-who-strangled-his-wife-and-surrendered-to-the-police-station/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ