
ಪ್ರಗತಿವಾಹಿನಿ ಸುದ್ದಿ: ಬೇಸಿಗೆ ಹಿನ್ನೆಲೆಯಲ್ಲಿ ರಣ ಬಿಸಿಲ ಝಳ ಹೆಚ್ಚುವುದರಿಂದ ಮುಂಜಾಗೃತಾ ಕ್ರಮವಾಗಿ ಉತ್ತರ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ಕಚೇರಿಗಳ ಸಮಯದಲ್ಲಿ ಬದಲಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಬೆಳಗಾವಿ ವಿಭಾಗದ ವಿಜಯಪುರ, ಬಾಗಲಕೋಟೆ ಮತ್ತು ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳಿಗೂ ಬೇಸಿಗೆ ಕಾಲದಲ್ಲಿ ಕಚೇರಿ ಕೆಲಸದ ವೇಳೆ ಬದಲಾವಣೆ ಮಾಡಲಾಗಿದೆ.
ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ಬಿಸಿಲಿನ ತಾಪ ಹೆಚ್ಚಾಗುವುದರಿಂದ ಸರ್ಕಾರಿ ಕಚೇರಿಗಳ ಸಮಯ ಬದಲಾವಣೆ ಮಾಡಲಾಗಿದೆ. ಕಚೇರಿ ಕೆಲಸದ ಸಮಯ ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 1:30ರವರೆಗೆ ನಿಗದಿಪಡಿಸಿ ಆದೇಶ ಹೊರಡಿಸಲಾಗಿದೆ.
ತುರ್ತು ಸಂದರ್ಭದಲ್ಲಿ ಯಾವುದೇ ಕಾರ್ಯವನ್ನು ನಿರ್ವಹಿಸಲು ನಿರ್ದೇಶಿಸಿದಲ್ಲಿ ಸಮಯದ ಪರಿಮಿತಿ ಇಲ್ಲದೇ ಕರ್ತವ್ಯ ನಿರ್ವಹಿಸಲು ಸೂಚಿಸಲಾಗಿದೆ.