ಗೋಕಾಕ ತಾಲೂಕಿನಾದ್ಯಂತ ಪ್ರವಾಹ ಪರಿಸ್ಥಿತಿ ಪರಿಶೀಲಿಸಿದ ಅಧಿಕಾರಿಗಳು
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಹಿಡಕಲ್ ಜಲಾಶಯದ ಒಳಹರಿವು ಹೆಚ್ಚಳವಾದ ಕಾರಣ ಡಿಸಿ ಮೊಹಮ್ಮದ್ ರೋಷನ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಸಿಇಒ ರಾಹುಲ್ ಶಿಂಧೆ ಹಾಗೂ ಎಸ್ ಪಿ ಭೀಮಾಶಂಕರ ಗುಳೇದ ಅವರು ಲೋಳಸೂರ ಸೇತುವೆ, ಉದಗಟ್ಟಿ ಸೇರಿದಂತೆ ಗೋಕಾಕ ತಾಲ್ಲೂಕಿನ ನದಿ ತೀರದ ವಿವಿಧ ಗ್ರಾಮಗಳಿಗೆ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು.
ಪ್ರವಾಹ ಸ್ಥಿತಿಗತಿ, ಹಿಡಕಲ್ ಜಲಾಶಯದಿಂದ ನೀರು ಬಿಡುವ ಮಾಹಿತಿಗಾಗಿ ನೀರಾವರಿ ಇಲಾಖೆ , ಕಂದಾಯ, ಜಿಲ್ಲಾ ಪಂಚಾಯಿತಿ ಹಾಗೂ ಇತರ ಇಲಾಖೆಯ ಅಧಿಕಾರಿಗಳು ಪರಸ್ಪರ ಹೊಂದಾಣಿಕೆಯಿಂದ ಕಾರ್ಯ ನಿರ್ವಹಿಸಿ ಸಂಭವನೀಯ ಪ್ರವಾಹ ಪರಿಸ್ಥಿತಿಯನ್ನು ಎದುರಿಸಬೇಕು. ಮುಂಜಾಗ್ರತಾ ಕ್ರಮವಾಗಿ ಈಗಾಗಲೇ ಗೋಕಾಕ ತಾಲೂಕಿನಲ್ಲಿ 37 ಗಂಜಿ ಕೇಂದ್ರಗಳನ್ನು ಗುರುತಿಸಲಾಗಿದ್ದು, ಪ್ರವಾಹ ಸಂಭವಿಸಿದರೆ ನದಿ ತೀರದ ಗ್ರಾಮಸ್ಥರನ್ನು ಗಂಜೀ ಕೇಂದ್ರಗಳಲ್ಲಿ ಸ್ಥಳಾಂತರಿಸಲಾಗುವುದು ಎಂದ ಅವರು ಹಿಡಕಲ್ ಜಲಾಶಯದಿಂದ ಬುಧವಾರ 10 ಸಾವಿರ ಕ್ಯೂಸೆಕ್ಸ ನೀರನ್ನು ನದಿಗೆ ಹರಿ ಬಿಡಲಾಗಿದ್ದು, ನದಿ ತೀರದ ಗ್ರಾಮಸ್ಥರು ಸುರಕ್ಷಿತ ಸ್ಥಳಗಳಿಗೆ ತೆರಳಬೇಕು ಎಂದು ಮನವಿ ಮಾಡಿದರು. ಮಹಾರಾಷ್ಟ್ರದಲ್ಲಿ ನಿರಂತರ ಮಳೆಯಾಗುತ್ತಿರುವ ಕಾರಣ ಘಟಪ್ರಭಾ , ಹಿರಣ್ಥಕೇಶಿ, ಕೃಷ್ಣಾ ನದಿಗಳಿಗೆ ಹೆಚ್ಚಿನ ನೀರು ಹರಿದು ಬರುತ್ತಿರುವ ಪರಿಣಾಮ ಜಿಲ್ಲೆಯ ಕೆಲವು ಕಡೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಅಧಿಕಾರಿಗಳು ಅದನ್ನು ಸರ್ಮಥವಾಗಿ ನಿಭಾಯಿಸುತ್ತಿದ್ದಾರೆ. ಯಾರು ಆತಂಕ ಪಡುವ ಅವಶ್ಯಕತೆ ಇಲ್ಲಾ ಎಂದು ಜಿಲ್ಲಾಧಿಕಾರಿ ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ, ಉಪ ವಿಭಾಗಾಧಿಕಾರಿ ಪ್ರಭಾವತಿ, ತಹಶೀಲ್ದಾರ್ ಡಾ.ಮೋಹನ ಭಸ್ಮೆ , ಡಿ.ವಾಯ್.ಎಸ್.ಪಿ. ಡಿ.ಮುಲ್ಲಾ, ಸಿಪಿಐ ಗೋಪಾಲ ರಾಠೋಡ , ಪಿಎಸ್ಐ ಕೆ.ವಾಲಿಕರ, ಡಾ.ಮೋಹನ ಕಮತ್, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ