Karnataka News

*ಒಗ್ಗರಣೆ ಅನ್ನ ಸೇವಿಸಿದ 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು*

ಪ್ರಗತಿವಾಹಿನಿ ಸುದ್ದಿ: ಒಗ್ಗರಣೆ ಅನ್ನ ಸೇವಿಸಿದ್ದ 50ಕ್ಕೂ ಹೆಚ್ಚು ಮಕ್ಕಳು ತೀವ್ರ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಗಿರುವ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ನಲ್ಲಿ ನಡೆದಿದೆ.

Home add -Advt

ಹುಮ್ನಾ ಬಾದ್ ನ ಬಸವತೀರ್ಥ ವಿದ್ಯಾಪೀಠ ಶಾಲೆಯಲ್ಲಿ ಈ ಘಟನೆ ನಡೆದಿದೆ. ರಾತ್ರಿ ಉಳಿದಿದ್ದ ಅನ್ನಕ್ಕೆ ಬೆಳಿಗ್ಗೆ ಒಗ್ಗರಣೆ ಹಾಕಿ ಮಕ್ಕಳಿಗೆ ಬಡಿಸಲಾಗಿತ್ತು. ಒಗ್ಗರಣೆ ಅನ್ನ ತಿಂದ ಮಕ್ಕಳಿ ಕೆಲವೇ ಹೊತ್ತಲ್ಲಿ ತೀವ್ರ ಅಸ್ವಸ್ಥರಾಗಿದ್ದಾರೆ. ವಾಂತಿ-ಬೇಧಿ ಕಾಣಿಸಿಕೊಂಡಿದ್ದು, ಮಕ್ಕಳ ಸ್ಥಿತಿ ಗಂಭೀರವಾಗಿದೆ.

ತಕ್ಷಣ ಅಸ್ವಸ್ಥ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಮಕ್ಕಳ ಆರೋಗ್ಯ ಸುಧಾರಿಸುತ್ತಿದ್ದು, ಆಸ್ಪತ್ರೆಗೆ ಶಾಸಕ ಭೀಮರಾವ್ ಪಾಟೀಕ್ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ. ವಿದ್ಯಾಪೀಠಕ್ಕೂ ವೈದ್ಯಾಧಿಕಾರಿಗಳು ಭೇಟಿ ನೀಡಿ ಉಳಿದವರ ಆರೋಗ್ಯ ತಪಾಸಣೆ ನಡೆಸಿದ್ದಾರೆ.

Related Articles

Back to top button