ಪ್ರಗತಿವಾಹಿನಿ ಸುದ್ದಿ, ಚಂಡಿಗಡ: ಹರ್ಯಾಣದ ಗುರುಗ್ರಾಮ್ ಬಳಿ ದೆಹಲಿ-ಜೈಪುರ ಹೆದ್ದಾರಿಯಲ್ಲಿ ತೈಲ ಟ್ಯಾಂಕರ್ ಡಿವೈಡರ್‌ಗೆ ಡಿಕ್ಕಿ ಹೊಡೆದು ಕಾರು ಮತ್ತು ಪಿಕಪ್ ವ್ಯಾನ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ನಾಲ್ವರು ಮೃತಪಟ್ಟಿದ್ದಾರೆ.
ತೈಲ ಟ್ಯಾಂಕರ್ ಮೂವರು ಪ್ರಯಾಣಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ ಪರಿಣಾಮ ಕಾರಿನಲ್ಲಿದ್ದ ಸಿಎನ್‌ಜಿ ಸಿಲಿಂಡರ್ ಗೆ ಬೆಂಕಿ ಹೊತ್ತಿಕೊಂಡು ಕಾರು ಹೊತ್ತಿ ಉರಿಯಿತು. ಕಾರಿನಲ್ಲಿದ್ದ ಮೂವರು ಸುಟ್ಟು ಕರಕಲಾದರು. ಕಾರಿಗೆ ಡಿಕ್ಕಿ ಹೊಡೆದ ಟ್ಯಾಂಕರ್ ಮುಂದೆ ಹೋಗಿ ಪಿಕ್ ಅಪ್ ವಾಹನವೊಂದಕ್ಕೆ ಡಿಕ್ಕಿ ಹೊಡೆದಿದ್ದು ಪಿಕ್ ಅಪ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಪೊಲೀಸರು ಸ್ಥಳೀಯರು, ಅಗ್ನಿಶಾಮಕ ಸಿಬ್ಬಂದಿಗಳು ಸೇರಿ ಕಾರಿನ ಬೆಂಕಿಯನ್ನು ನಂದಿಸಿದ್ದಾರೆ. ಅಪಘಾತ ಸಂಭವಿಸುತ್ತಲೇ ಟ್ಯಾಂಕರ್ ಚಾಲಕ ಘಟನಾ ಸ್ಥಳದಿಂದ ಪರಾರಿಯಾಗಿದ್ದು ಆತನಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ತನಿಖಾಧಿಕಾರಿ ವಿನೋದ್ ಕುಮಾರ್ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ