Kannada NewsKarnataka NewsLatest
*ಭೀಕರ ಅಪಘಾತ; ಸ್ಥಳದಲ್ಲೇ ನಾಲ್ವರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ;
ನವದೆಹಲಿ: ಭೀಕರ ಸರಣಿ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿರುವ ಘಟನೆ ದೆಹಲಿ-ಜೈಪುರ ಹೆದ್ದಾರಿಯ ಗುರುಗ್ರಾಮ್ ನ ಸಿದ್ರಾವಲಿ ಗ್ರಾಮದಲ್ಲಿ ನಡೆದಿದೆ.
ತೈಲ ಟ್ಯಾಂಕರ್, ಕಾರು ಮತ್ತು ಪಿಕಪ್ ವ್ಯಾನ್ ಡಿಕ್ಕಿಯಾಗಿದ್ದು, ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತೈಲ ಟ್ಯಾಂಕರ್ ಡಿವೈಡರ್ ಗೆ ಡಿಕ್ಕಿ ಹೊಡೆದು ಬಳಿಕ ಕಾರಿಗೆ ಡಿಕ್ಕಿ ಹೊಡೆದಿದೆ. ಟ್ಯಾಂಕರ್ ಡಿಕ್ಕಿ ಹೊಡೆಯುತ್ತಿದ್ದಂತೆಯೇ ಕಾರಿನೊಳಗಿದ್ದ ಸಿಲಿಂಡರ್ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ.
ಇದೇ ವೇಳೆ ಕಾರಿನ ಹಿಂದೆ ಬರುತ್ತಿದ್ದ ಪಿಕಪ್ ವಾಹನ ಕಾರಿಗೆ ಗುದ್ದಿದೆ, ಡಿಕ್ಕಿ ರಭಸಕ್ಕೆ ವ್ಯಾನ್ ಚಾಲಕ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದ ಬಳಿಕ ಟ್ಯಾಂಕರ್ ಚಾಲಕ ಎಸ್ಕೇಪ್ ಆಗಿದ್ದಾನೆ. ಆತನ ಪತ್ತೆಗೆ ಕಾರ್ಯಾಚರಣೆ ನಡೆಸಲಾಗಿದೆ.




