Latest

ಸರ್ಕಾರಕ್ಕೆ ಮೀಸಲಾತಿ ಡೆಡ್ ಲೈನ್; ಒಕ್ಕಲಿಗ ಸ್ವಾಮೀಜಿಗಳಿಂದ ಹೋರಾಟದ ಎಚ್ಚರಿಕೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಮೀಸಲಾತಿ ಹೆಚ್ಚಳ ವಿಚಾರ ಈಗ ತಲೆನೋವಾಗಿ ಪರಿಣಮಿಸಿದೆ. ಒಕ್ಕಲಿಗ ಸಮುದಾಯದ ಸ್ವಾಮೀಜಿಗಳು ಸರ್ಕಾರಕ್ಕೆ ಗಡುವು ನೀಡಿದ್ದು ಮೀಸಲಾತಿ ಹೆಚ್ಚಿಸದಿದ್ದರೆ ಹೋರಾಟದ ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕದಲ್ಲಿ ಒಕ್ಕಲಿಗ ಸಮುದಾಯದ ಜನಸಂಖ್ಯಾ ಪ್ರಮಾಣ ಶೇ.19ರಷ್ಟಿದ್ದು ಶೇ.4ರಷ್ಟು ಮಾತ್ರ ಮೀಸಲಾತಿ ಇದೆ. ಇದನ್ನು ಶೇ.15ಕ್ಕೆ ಏರಿಸಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಲು ಒಕ್ಕಲಿಗ ಸಮುದಾಯದ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

Related Articles

ಆದಿಚುಂಚನಗಿರಿ ನಿರ್ಮಲಾನಂದ ಸ್ವಾಮೀಜಿ ಹಾಗೂ ನಂಜಾವದೂತ ಸ್ವಾಮೀಜಿ ನೇತೃತ್ವದಲ್ಲಿ ಸಭೆ ನಡೆದಿದ್ದು, ಸಭೆ ಬಳಿಕ ಮಾತನಾಡಿದ ನಂಜಾವದೂತ ಸ್ವಾಮೀಜಿ, ಒಕ್ಕಲಿಗ ಸಮುದಾಯಕ್ಕೆ ಶೇ.15ರಷ್ಟು ಮೀಸಲಾತಿ ಹೆಚ್ಚಳ ಮಾಡಬೇಕು.  ಈವರೆಗೆ ನಾವು ಸಹನೆಯಿಂದ ಕಾದಿದ್ದೇವೆ. ನಮ್ಮ ಸಹನೆ ದೌರ್ಬಲ್ಯ ಎಂದುಕೊಳ್ಳುವುದು ಬೇಡ. ಸರ್ಕಾರಕ್ಕೆ ಜನವರಿ 23ರವರೆಗೆ ಗಡುವು ನೀಡುತ್ತೇವೆ. ಅಷ್ಟರಲ್ಲಿ ಮೀಸಲಾತಿ ಹೆಚ್ಚಳ ಮಾಡಿ ಆದೇಶ ಹೊರಡಿಸಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಹೋರಾಟದ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಬೆಳಗಾವಿಯಲ್ಲಿ ಭೀಕರ ಸರಣಿ ಅಪಘಾತ

https://pragati.taskdun.com/belagaviaccident3-carlorry/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button