Kannada NewsKarnataka NewsLatestNational

*ಓಲಾ, ಊಬರ್, ರ್ಯಾಪಿಡೋ ಮುಷ್ಕರ: ದೇಶಾದ್ಯಂತ ಸೇವೆ ಸ್ಥಗಿತ*

ಪ್ರಗತಿವಾಹಿನಿ ಸುದ್ದಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ದೇಶಾದ್ಯಂತ ಇಂದು ಓಲಾ, ಊಬರ್, ರ್ಯಾಪಿಡೋ ಆಪ್ ಆಧಾರಿತ ಟ್ಯಾಕ್ಸಿ ಚಾಲಕರು ಮುಷ್ಕರ ನಡೆಸುತ್ತಿದ್ದಾರೆ.

ಮುಷ್ಕರ ಹಿನ್ನೆಲೆಯಲ್ಲಿ ದೇಶಾದ್ಯಂತ ಟ್ಯಾಕ್ಸಿ ಸೇವೆಯಲ್ಲಿ ಭಾರಿ ವ್ಯತ್ಯಯವುಂಟಾಗಿದೆ. ದೆಹಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಇದಕ್ಕೆ ಬೆಂಬಲವಾಗಿ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿಯೂ ಟ್ಯಾಕ್ಸಿ ಸೇವೆ ಬಂದ್ ಮಾಡಿ ಮುಷ್ಕರ ನಡೆಸಲಾಗುತ್ತಿದೆ.

ಚಾಲಕರು ಸುಮಾರು ಆರು ಗಂಟೆಗಳ ಕಾಲ ತಮ್ಮ ಆಪ್ ಗಳನ್ನು ಆಫ್ ಮಾಡಿ ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದಾರೆ. ಮುಷ್ಕರಕ್ಕೆ ತೆಲಂಗಾಣ ಗಿಗ್ ಹಾಗೂ ಪ್ಲಾಟ್ ಫಾರ್ಮ್ ಕಾರ್ಮಿಕರ ಒಕ್ಕೂಟ ಹಾಗೂ ಇತರ ಕಾರ್ಮಿಕ ಸಂಘಟನೆಗಳೂ ಬೆಂಬಲ ವ್ಯಕ್ತಪಡಿಸಿವೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button