ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ರೂಪಾಂತರಿ ಕೊರೊನಾ ವೈರಸ್ ಒಮಿಕ್ರಾನ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮತ್ತೆ ಟಫ್ ರೂಲ್ಸ್ ಜಾರಿಯಾಗುವ ಸಾಧ್ಯತೆ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಸುಳಿವು ನೀಡಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯ ಹಾಗೂ ದೇಶಾದ್ಯಂತ ಒಮಿಕ್ರಾನ್ ಪ್ರಕರಣ ಹೆಚ್ಚುತ್ತಿದೆ. ಕೋವಿಡ್ ಕೇಸ್ ಕೂಡ ಕೆಲವೆಡೆ ಏರಿಕೆಯಾಗಿದೆ. ಇಂತಹ ಆತಂಕಗಳ ನಡುವೆ ಹೊಸ ವರ್ಷಾಚರಣೆಗೆ ಅವಕಾಶ ನೀಡಲು ಸಾಧ್ಯವೇ ಇಲ್ಲ. ಈಗಾಗಲೇ ಹೋಟೆಲ್, ಪಬ್, ಬಾರ್, ರೆಸ್ಟೋರೆಂಟ್ ಗಳಲ್ಲಿ ಶೇ.50ರಷ್ಟು ಅವಕಾಶ ನೀಡಲಾಗಿದೆ. ಆದರೆ ಇನ್ನಷ್ಟು ನಿರ್ಬಂಧಗಳನ್ನು ವಿದ್ಗಿಸುವ ಬಗ್ಗೆ ಚಿಂತನೆ ನಡೆದಿದೆ ಎಂದರು.
ಈವರೆಗೂ ಮಹಾರಾಷ್ಟ್ರ ಹಾಗೂ ಕೇರಳ ರಾಜ್ಯಗಳಲ್ಲಿ ಒಮಿಕ್ರಾನ್ ಆತಂಕ ಇತ್ತು. ಆದರೆ ಈಗ ತಮಿಳುನಾಡಿನಲ್ಲಿಯೂ ಪ್ರಕರಣ ಹೆಚ್ಚುತ್ತಿರುವುದರಿಂದ ನಮ್ಮ ರಾಜ್ಯದಲ್ಲಿ ಕಟ್ಟುನಿಟ್ಟಾಗಿ ಯಾವೆಲ್ಲ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ಬಗ್ಗೆ ತಜ್ಞರ ಜತೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ತಿಳಿಸಿದರು.
ದೇಶದಲ್ಲಿ ಒಮಿಕ್ರಾನ್ ಕೇಸ್ ಹೆಚ್ಚುತ್ತಿರುವುದರಿಂದ ಕೇಂದ್ರ ಸರ್ಕಾರ ಕೂಡ ಗೈಡ್ ಲೈನ್ ಬಗ್ಗೆ ಮಾಹಿತಿ ನೀಡಿದೆ. ಕೇಂದ್ರದ ಗೈಡ್ ಲೈನ್ ಗೆ ಅನುಗುಣವಾಗಿ ಕೆಲ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಬಗ್ಗೆ ನಿರ್ಧರಿಸಲಾಗುವುದು ಎಂದರು.
ನಾಳೆ ಸಿಎಂ ಬಸವರಾಜ್ ಬೊಮ್ಮಾಯಿ ನೃತ್ವದಲ್ಲಿ ತಜ್ಞರ ಸಭೆ ನಡೆಯಲಿದ್ದು, ಡಿಸೆಂಬರ್ 31ರಿಂದ ಜನವರಿ 2ರವರೆಗೂ ನೈಟ್ ಕರ್ಫ್ಯೂ ಜಾರಿ ಬಗ್ಗೆಯೂ ಸಭೆಯಲ್ಲಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ಚಲಿಸುತ್ತಿದ್ದ ಬಸ್ ನಲ್ಲೇ ಹೃದಯಾಘಾತ; ಕೆ.ಎಸ್.ಆರ್.ಟಿ ಬಸ್ ಕಂಡಕ್ಟರ್ ಸಾವು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ