Latest

ಒಂದೇ ಕುಟುಂಬದ ನಾಲ್ವರಲ್ಲಿ ಒಮಿಕ್ರಾನ್ ಸೋಂಕು ದೃಢ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಅಟ್ಟಹಾಸದ ಬೆನ್ನಲ್ಲೇ ರಾಜ್ಯದಲ್ಲಿ ರೂಪಾಂತರಿ ವೈರಸ್ ಒಮಿಕ್ರಾನ್ ಸೋಂಕು ಹೆಚ್ಚುತ್ತಿದ್ದು, ಒಂದೇ ಕುಟುಬದ ನಾಲ್ವರಲ್ಲಿ ಮಹಾಮಾರಿ ವೈರಸ್ ಪತ್ತೆಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಯುಕೆಯಿಂದ ಬೆಂಗಳೂರಿನ ಕೋರಮಂಗಲಕ್ಕೆ ಆಗಮಿಸಿದ್ದ 26 ವರ್ಷದ ಯುವತಿಯಲ್ಲಿ ಒಮಿಕ್ರಾನ್ ಸೋಂಕು ದೃಢಪಟ್ಟಿದೆ. ಯುವತಿಯ ತಂದೆ-ತಾಯಿ ಹಾಗೂ ತಂಗಿಯಲ್ಲಿಯೂ ಸೋಂಕು ಪತ್ತೆಯಾಗಿದೆ.

ನಾಲ್ವರು ಸೋಂಕಿತರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸೋಂಕಿತರಿದ್ದ ಇಡೀ ಫ್ಲ್ಯಾಟ್ ಸೀಲ್ ಡೌನ್ ಮಾಡಲಾಗಿದೆ ಎಂದು ಬಿಬಿಎಂಪಿ ವಿಶೇಷ ಆಯುಕ್ತ ತ್ರಿಲೋಕ್ ಚಂದ್ರ ಮಾಹಿತಿ ನೀಡಿದ್ದಾರೆ.
9 ವರ್ಷದ ಬಾಲಕಿಯಲ್ಲಿ ಒಮಿಕ್ರಾನ್ ಸೋಂಕು; ರಾಜ್ಯದಲ್ಲಿ ಮತ್ತೊಂದು ಪ್ರಕರಣ ಪತ್ತೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button