Latest

SHOCKING NEWS – ಕರ್ನಾಟಕಕ್ಕೆ ಒಮಿಕ್ರಾನ್ ಎಂಟ್ರಿ; ದೇಶದಲ್ಲೇ ಮೊದಲು

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ರಾಜ್ಯದ ಜನತೆಯನ್ನು ಬೆಚ್ಚಿ ಬೀಳಿಸುವಂತಹ ಸುದ್ದಿಯೊಂದು ಹೊರಬಿದ್ದಿದ್ದು, ದೇಶದಲ್ಲೇ ಮೊದಲ ಒಮಿಕ್ರಾನ್ ಕೇಸ್ ಕರ್ನಾಟಕದಲ್ಲಿ ಪತ್ತೆಯಾಗಿದ್ದು ಇಬ್ಬರಲ್ಲಿ ಹೊಸ ರೂಪಾಂತರಿ ವೈರಸ್ ದೃಢಪಟ್ಟಿದೆ.

ಈ ಕುರಿತು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಭಾರತದಲ್ಲಿಯೇ ಮೊದಲ ಹೊಸ ರೂಪಾಂತರಿ ತಳಿ ಕರ್ನಾಟಕದಲ್ಲಿ ಪತ್ತೆಯಾಗಿದೆ. ಆಫ್ರಿಕಾದಿಂದ ಆಗಮಿಸಿದ್ದ ಇಬ್ಬರಲ್ಲಿ ಒಮಿಕ್ರಾನ್ ವೈರಸ್ ದೃಢಪಟ್ಟಿದೆ ಎಂದು ತಿಳಿಸಿದೆ.

ಆಫ್ರಿಕಾದಿಂದ ಬೆಂಗಳೂರಿಗೆ ಆಗಮಿಸಿದ್ದ 66 ವರ್ಷದ ವೃದ್ಧ ಹಾಗೂ 46 ವರ್ಷದ ವ್ಯಕ್ತಿಯಲ್ಲಿ ಒಮಿಕ್ರಾನ್ ಪತ್ತೆಯಾಗಿದ್ದು, ಸೊಂಕಿತರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರನ್ನೂ ಪರೀಕ್ಷೆಗೆ ಒಳಪಡಿಸಲಾಗಿದೆ. ಕರ್ನಾಟಕದಲ್ಲಿ ಪತ್ತೆಯಾದ ಎರಡು ಒಮಿಕ್ರಾನ್ ಕೇಸ್ ಕೂಡ ಬೆಂಗಳೂರಿನಲ್ಲಿ ಪತ್ತೆಯಾಗಿದೆ. ಸೂಕ್ತ ಸಮಯದಲ್ಲಿ ನಾವು ಸೊಂಕಿತರ ಟ್ರ್ಯಾಕ್ ಮಾಡಿದ್ದೇವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಜವಾದ್ ಚಂಡಮಾರುತ ಹಿನ್ನೆಲೆ; ಕರ್ನಾಟಕದ 12 ರೈಲು ಸೇವೆ ಸ್ಥಗಿತ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button