Latest

9 ವರ್ಷದ ಬಾಲಕಿಯಲ್ಲಿ ಒಮಿಕ್ರಾನ್ ಸೋಂಕು; ರಾಜ್ಯದಲ್ಲಿ ಮತ್ತೊಂದು ಪ್ರಕರಣ ಪತ್ತೆ

ಪ್ರಗತಿವಾಹಿನಿ ಸುದ್ದಿ; ಮೈಸೂರು: ದಿನದಿಂದ ದಿನಕ್ಕೆ ರಾಜ್ಯದಲ್ಲಿ ಕೊರೊನಾ ರೂಪಾಂತರಿ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಚಿಕ್ಕ ಮಕ್ಕಳಲ್ಲಿಯೂ ಸೋಂಕು ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ.

ಮೈಸೂರು ಜಿಲ್ಲೆಯಲ್ಲಿ ಮೊದಲ ಒಮಿಕ್ರಾನ್ ಸೋಂಕು ಪತ್ತೆಯಾಗಿದ್ದು, ವಿದೇಶದಿಂದ ಆಗಮಿಸಿದ 9 ವರ್ಷದ ಬಾಲಕಿಯಲ್ಲಿ ವೈರಸ್ ದೃಢಪಟ್ಟಿದೆ.

ಸ್ವಿಜರ್ಲ್ಯಾಂಡ್ ನಿಂದ ಆಗಮಿಸಿದ್ದ 9 ವರ್ಷದ ಬಾಲಕಿಗೆ ಒಮಿಕ್ರಾನ್ ಸೋಂಕು ಪತ್ತೆಯಾಗಿದ್ದು, ಮಗುವಿನ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರನ್ನು ತಪಾಸಣೆ ನಡೆಸಲಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಮೂಲಕ ರಾಜ್ಯದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ 236 ಜನರಲ್ಲಿ ಒಮಿಕ್ರಾನ್ ಪತ್ತೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button