ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹೊಸ ವರ್ಷದ ಸ್ವಾಗತಕ್ಕೆ ಸಜ್ಜಾಗಿರುವ ನಡುವೆವೇ ರಾಜ್ಯಕ್ಕೆ ರೂಪಾಂತರಿ ವೈರಸ್ ಆಘಾತ ನೀಡಿದ್ದು, ಇಂದು ಒಂದೇ ದಿನದ ರಾಜ್ಯದಲ್ಲಿ 23 ಜನರಲ್ಲಿ ಒಮಿಕ್ರಾನ್ ಸೋಂಕು ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ 66ಕ್ಕೆ ಏರಿಕೆಯಾಗಿದೆ.
ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಈ ಕುರಿತು ಮಾಹಿತಿ ನೀಡಿದ್ದು, ಇಂದು ರಾಜ್ಯದಲ್ಲಿ 23 ಜನರಲ್ಲಿ ಒಮಿಕ್ರಾನ್ ದೃಢಪಟ್ಟಿದೆ. ಸೋಂಕಿತರಲ್ಲಿ 19 ಜನರು ವಿದೇಶಗಳಿಂದ ಆಗಿಮಿಸಿದವರಾಗಿದ್ದಾರೆ ಎಂದು ತಿಳಿಸಿದ್ದಾರೆ.
ಅಮೆರಿಕಾ, ಯುರೋಪ್, ಆಫ್ರಿಕಾ ದೇಶಗಳಿಂದ ಆಗಮಿಸಿದವರಲ್ಲಿ ಸೋಂಕು ಪತ್ತೆಯಾಗಿದೆ ಎಂದು ಹೇಳಿದ್ದಾರೆ.
ವರ್ಗಾವಣೆ ಸುದ್ದಿ ಕೇಳಿ ಶಾಕ್; ಶಿಕ್ಷಕ ಸಾವು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ