Latest

ಮತ್ತೆ 8 ಜನರಲ್ಲಿ ಒಮಿಕ್ರಾನ್ ದೃಢ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶದಲ್ಲಿ ಕೊರೊನಾ ಹೊಸ ರೂಪಾಂತರಿ ಅಟ್ಟಹಾಸ ಹೆಚ್ಚುತ್ತಿದ್ದು, ಮತ್ತೆ 8 ಜನರಲ್ಲಿ ಒಮಿಕ್ರಾನ್ ಸೋಂಕು ದೃಢಪಟ್ಟಿದೆ.

ದೆಹಲಿಯಲ್ಲಿ 4 ಜನರಲ್ಲಿ ಒಮಿಕ್ರಾನ್ ಸೋಂಕು ಪತ್ತೆಯಾಗಿದ್ದರೆ, ರಾಜಸ್ಥಾನದಲ್ಲಿ ಕೂಡ 4 ಜನರಲ್ಲಿ ಒಮಿಕ್ರಾನ್ ದೃಢಪಟ್ಟಿದೆ. ಈ ಮೂಲಕ ದೇಶದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ 49ಕ್ಕೆ ಏರಿಕೆಯಾಗಿದೆ.

ಇನ್ನು ಇಂದು ದೆಹಲಿಯಲ್ಲಿ ಪತ್ತೆಯಾದ ನಾಲ್ವರು ಒಮಿಕ್ರಾನ್ ಸೋಂಕಿತರಲ್ಲಿ ಸೌಮ್ಯ ಲಕ್ಷಣಗಳು ಕಂಡುಬಂದಿದೆ. ದೆಹಲಿಯಲ್ಲಿ ಒಟ್ಟು 6 ಜನರಲ್ಲಿ ಒಮಿಕ್ರಾನ್ ಪತ್ತೆಯಾಗಿದ್ದು, ರಾಜಸ್ಥಾನದಲ್ಲಿ ಸೋಂಕಿತರ ಸಂಖ್ಯೆ 13ಕ್ಕೇರಿದೆ.
ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಟೀಮ್ ವರ್ಕ್ ನನ್ನ ಗೆಲುವಿಗೆ ಕಾರಣ – ಚನ್ನರಾಜ ಹಟ್ಟಿಹೊಳಿ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button