Latest

ಲಸಿಕೆ ಪಡೆಯದವರಿಗೆ ಮಾತ್ರ ಸರ್ಕಾರಿ ಸೌಲಭ್ಯ ಎಂಬ ಶಿಫಾರಸ್ಸನ್ನು ಸರ್ಕಾರ ಒಪ್ಪಲು ಸಾಧ್ಯವಿಲ್ಲ – ಸುಧಾಕರ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಎಲ್ಲಾ ರೀತಿಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಒಮಿಕ್ರಾನ್ ತಡೆಗಟ್ಟುವ ಬಗ್ಗೆಯೂ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವ ಸುಧಾಕರ್, ಕೊವಿಡ್ ನಿಯಂತ್ರಣ ಕುರಿತು ರಾಜ್ಯ ಸರ್ಕಾರ ಕಾಲ ಕಾಲಕ್ಕೆ ಸಭೆ ನಡೆಸಿ ಆರೋಗ್ಯಾಧಿಕಾರಿಗಳಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗುತ್ತಿದೆ. ಕೊರೊನಾ ಪ್ರಕರಣ ನೋಡಿಕೊಂಡು ಮುಂದಿನ ಕ್ರಮದ ಬಗ್ಗೆ ನಿರ್ಧರಿಸಲಾಗುವುದು ಎಂದರು.

ವಿದೇಶಗಳಿಂದ ಬರುವವರಿಗೆ ಕಡ್ಡಾಯ ಕೋವಿಡ್ ಟೆಸ್ಟ್ ಮಾಡುವಂತೆ ಸೂಚಿಸಲಾಗಿದೆ. ಟೆಸ್ಟ್ ವರದಿ ನೆಗೆಟಿವ್ ಬಂದರೆ ಹೋಂ ಕ್ವಾರಂಟೈನ್ ಮಾಡಲಾಗುವುದು. 5ನೇ ದಿನ ಮತ್ತೊಮ್ಮೆ ಟೆಸ್ಟ್ ಮಾಡಲಾಗುತ್ತದೆ. ಆಗಲೂ ಕೋವಿಡ್ ನೆಗೆಟಿವ್ ಬಂದರೆ ಕ್ವಾರಂಟೈನ್ ನಿಂದ ರಿಲೀಸ್ ಮಾಡಲಾಗುವುದು. ಪಾಸಿಟಿವ್ ಬಂದರೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುವುದು ಎಂದರು.

ಇದೇ ವೇಳೆ ಲಸಿಕೆ ಕಡ್ಡಾಯವನ್ನು ಒಪ್ಪಲ್ಲ. ಲಸಿಕೆ ಪಡೆಯದವರಿಗೆ ಮಾತ್ರ ಸರ್ಕಾರಿ ಸೌಲಭ್ಯ ಎಂಬ ಯಾವುದೇ ಶಿಫಾರಸ್ಸನ್ನು ಸರ್ಕಾರ ಒಪ್ಪಲು ಸಾಧ್ಯವಿಲ್ಲ. ಇಂತಹ ಯಾವುದೇ ಪ್ರಸ್ತಾಪವೂ ಇಲ್ಲ ಎಂದು ಸ್ಪಷ್ಟಪಡಿಸಿದರು.

Home add -Advt

ಹೊಸ ಸ್ಕೂಟರ್ ಗೆ SEX ನಂಬರ್; ಮುಜುಗರಕ್ಕೀಡಾದ ಯುವತಿ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button