ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ರೂಪಾಂತರಿ ಒಮಿಕ್ರಾನ್ ಆತಂಕ ಹಿನ್ನೆಲೆಯಲ್ಲಿ ಇಂದು ಆರೋಗ್ಯ ಸಚಿವ ಡಾ.ಸುಧಾಕರ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಸಭೆಯಲ್ಲಿ ಕೊರೊನಾ ಕಟ್ಟಿಹಾಕಲು ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಚರ್ಚೆ ನಡೆಯಲಿದೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುಧಾಕರ್, ರಾಜ್ಯದಲ್ಲಿ ಕೊರೊನಾ ಆತಂಕ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಒಮಿಕ್ರಾನ್ ವೇಗವಾಗಿ ಹರಡುತ್ತದೆ ಆದರೆ ಪರಿಣಾಮಗಳ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿಲ್ಲ. ಗಾಬರಿಪಡುವಂತ ಅಗತ್ಯವಿಲ್ಲ ಎಂದರು.
ಒಮಿಕ್ರಾನ್ ಆತಂಕ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ಕೋವಿಡ್ ನಿರ್ವಹಣಾ ಸಮಿತಿ ಸದಸ್ಯರು, ತಜ್ಞರ ಜೊತೆ ಸಭೆ ನಡೆಯಲಿದ್ದು, ಸಭೆಯಲ್ಲಿ ಕೆಲ ವಿಚಾರಗಳನ್ನು ಚರ್ಚಿಸಲಾಗುವುದು. ವ್ಯಾಕ್ಸಿನ್ 2ನೇ ಡೋಸ್, ಮಕ್ಕಳಿಗೆ ಲಸಿಕೆ ವಿಚಾರನ್ನೂ ಚರ್ಚಿಸಲಾಗುವುದು. ಮೂರನೇ ಡೋಸ್ ಬಗ್ಗೆ ನಾವಿನ್ನೂ ನಿರ್ಧರಿಸಿಲ್ಲ ಎಂದು ತಿಳಿಸಿದರು.
ದಕ್ಷಿಣ ಆಫ್ರಿಕಾದಿಂದ 72 ಜನರು ರಾಜ್ಯಕ್ಕೆ ಆಗಮಿಸಿದ್ದು, ಇಬ್ಬರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಅವರಲ್ಲಿ ಓರ್ವರಲ್ಲಿ ಡೆಲ್ಟಾಗಿಂತ ಭಿನ್ನ ವೈರಸ್ ಪತ್ತೆಯಾಗಿದ್ದು, ಕೊಂಚ ಆತಂಕ ಸೃಷ್ಟಿಸಿದೆ. ಲ್ಯಾಬ್ ವರದಿ ನಿನ್ನೆಯೇ ಬರಬೇಕಿತ್ತು. ಇಂದು ಬರುವ ಸಾಧ್ಯತೆ ಇದೆ. ವರದಿ ಬಳಿಕ ಮಾಹಿತಿ ನೀಡಲಾಗುವುದು ಎಂದರು.
ಬೆಳ್ಳಂ ಬೆಳಗ್ಗೆ ಜೈಲಿನ ಮೇಲೆ ಸಿಸಿಬಿ ದಾಳಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ