ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಒಂದೆಡೆ ಚಳಿಗಾಲ, ಮತ್ತೊಂದೆಡೆ ಹೊಸ ವರ್ಷಾರಣೆಗೆ ಸಿದ್ಧತೆ ನಡುವೆಯೇ ದೇಶದಲ್ಲಿ ಹೊಸ ರೂಪಾಂತರಿ ವೈರಸ್ ಒಮಿಕ್ರಾನ್ ಪ್ರಕರಣ ಹೆಚ್ಚುತ್ತಿದೆ. ಭಾರತದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ 236ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ದೇಶದಲ್ಲಿ ಹೆಚ್ಚುತ್ತಿರುವ ಒಮಿಕ್ರಾನ್ ಹಿನ್ನೆಲೆಯಲ್ಲಿ ಇಂದು ಪ್ರಧಾನಿ ಮೋದಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಇನ್ನು ಒಮಿಕ್ರಾನ್ ಸೋಂಕಿತ 236 ಜನರ ಪೈಕಿ 104 ಜನರು ಗುಣಮುಖರಾಗಿದ್ದಾರೆ ಎಂದು ವಿವರಿಸಿದೆ.
ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಅಂದರೆ 65 ಜನರಲ್ಲಿ ಒಮಿಕ್ರಾನ್ ಪತ್ತೆಯಾಗಿದ್ದರೆ ಕರ್ನಾಟಕದಲ್ಲಿ 19 ಜನರಲ್ಲಿ ಹೊಸ ರೂಪಾಂತರಿ ಪತ್ತೆಯಾಗಿದೆ.
ಮಹಾರಾಷ್ಟ್ರ-65
ದೆಹಲಿ-64
ತೆಲಂಗಾಣ-24
ರಾಜಸ್ಥಾನ -21
ಕರ್ನಾಟಕ-19
ಕೇರಳ-15
ಗುಜರಾತ್ -14
ಜಮ್ಮು-ಕಾಶ್ಮೀರ -3
ಆಂಧ್ರಪ್ರದೇಶ, ಓಡಿಶಾ ಹಾಗೂ ಉತ್ತರ ಪ್ರದೇಶಗಳಲ್ಲಿ ತಲಾ 2
ಚಂಡಿಗಢ, ಲಡಾಖ್, ತಮಿಳುನಾಡು, ಉತ್ತರಾಖಂಡ್, ಪಶ್ಚಿಮ ಬಂಗಾಳಗಳಲ್ಲಿ ತಲಾ 1 ಕೇಸ್ ಪತ್ತೆಯಾಗಿದೆ ಎಂದು ಮಾಹಿತಿ ನೀಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ