ಪ್ರಗತಿವಾಹಿನಿ ಸುದ್ದಿ; ಉಡುಪಿ: ರಾಜ್ಯದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈ ನಡುವೆ ಉಡುಪಿ ಜಿಲ್ಲೆಯಲ್ಲಿ ರೂಪಾಂತರಿ ವೈರಸ್ ಭೀತಿ ಹೆಚ್ಚಿದೆ. ಉಡುಪಿ ಜಿಲ್ಲೆಯಲ್ಲಿ ಒಂದೇ ದಿನ 14 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದರೆ, ಇನ್ನೊಂದೆಡೆ ಮಣಿಪಾಲದಲ್ಲಿ ವಾರದಲ್ಲಿ 18 ಜನರಲ್ಲಿ ಕೋವಿಡ್ ಪಾಸಿಟಿವ್ ಬಂದಿದೆ.
ಅದರಲ್ಲೂ ವಿದ್ಯಾರ್ಥಿಗಳಲ್ಲಿಯೇ ಸೋಂಕು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವುದು ಇನ್ನಷ್ಟು ಆತಂಕಕ್ಕೆ ಕಾರಣವಾಗಿದೆ. ಓರ್ವ ಎಂಐಟಿ ವಿದ್ಯಾರ್ಥಿಗೆ ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ವಿದ್ಯಾರ್ಥಿಯ ಪ್ರಾಥಮಿಕ ಸಂಪರ್ಕಿತರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿತ್ತು. ಈ ವೇಳೆ 9 ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ. ಮಣಿಪಾಲದ ಐಎಂಟಿ ವಲಯವನ್ನು ಮೈಕ್ರೋ ಕಂಟೇನೆಂಟ್ ಜೋನ್ ಎಂದು ಪರಿಗಣಿಸಲಾಗಿದೆ.
ಇನ್ನು ಉಡುಪಿಯಲ್ಲಿ 14 ಜನರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಎಲ್ಲರ ಸ್ಯಾಂಪಲ್ ನ್ನು ಆರೋಗ್ಯ ಇಲಾಖೆ ಬೆಂಗಳೂರಿಗೆ ರವಾನಿಸಲಾಗಿದೆ. ಕಳೆದ ಒಂದು ವಾರದಿಂದ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗುತ್ತಿದ್ದು, ಇದೀಗ ಒಂದೇ ದಿನ 14 ಜನರಲ್ಲಿ ಸೋಂಕು ದೃಢಪಟ್ಟಿರುವುದು ಒಮಿಕ್ರಾನ್ ಭೀತಿ ಹೆಚ್ಚಲು ಕಾರಣವಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ